ಕೂಡಿಗೆ, ಸೆ. ೮: ರೂ. ೪ ಕೋಟಿ ವೆಚ್ಚದಲ್ಲಿ ಉದ್ದೇಶಿಸಿರುವ ಕೂಡಿಗೆ-ಕುಶಾಲನಗರ-ಹಾಸನ ರಾಜ್ಯ ಹೆದ್ದಾರಿಯ ಮರು ಡಾಂಬರೀಕರಣ ಆರಂಭಗೊAಡಿದೆ.
ಕಾಮಗಾರಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆಯನ್ನು ನೆರವೇರಿಸಿದ್ದರು.
ಮಳೆ ಹಿನ್ನೆಲೆ ಕಾಮಗಾರಿ ಕೈಗೆತ್ತಿಕೊಂಡಿರಲಿಲ್ಲ. ಮಳೆಯ ಪ್ರಮಾಣ ಇಳಿಕೆಯಾದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿದೆ. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಅರ್ಬಾಜ್, ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.