ಸೋಮವಾರಪೇಟೆ, ಸೆ. ೯: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಇವುಗಳ ಆಶ್ರಯದಲ್ಲಿ ತಾ. ೧೦ರಂದು (ಇಂದು) ಸ್ಥಳೀಯ ಒಕ್ಕಲಿಗರ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ.

ಬೆಳಿಗ್ಗೆ ೧೦ ಗಂಟೆಗೆ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ನೆರವೇರಿಸಲಿದ್ದು, ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.