ಕುಶಾಲನಗರ, ಸೆ. ೯: ವಿದ್ಯಾರ್ಥಿ ಕಾಲೇಜಿನ ಆವರಣದಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ‘ಇನ್ಸಾ÷್ಟಗ್ರಾಂ’ನಲ್ಲಿ ಹಂಚಿಕೊAಡ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದರು.

ಕುಶಾಲನಗರ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಪವನ್ ಎಂಬಾತ ಮಚ್ಚು ಹಿಡಿದು ತರಗತಿಯ ಮುಂದೆ ಓಡಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ ಕುಶಾಲನಗರ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಿಸಿದರು. ವಿದ್ಯಾರ್ಥಿ ಮುಂದೆ ಇಂತಹ ತಪ್ಪು ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿರುವುದಾಗಿ ತಿಳಿದು ಬಂದಿದೆ.

- ಸಿಂಚು