ಮಡಿಕೇರಿ ಸೆ. ೯: ವಿದ್ಯಾರ್ಥಿಗಳು ಶಿಸ್ತುಬದ್ದ ಜೀವನ ನಡೆಸುವ ಮೂಲಕ ಶೈಕ್ಷಣಿಕ ಗುರಿ ಸಾಧಿಸಬೇಕು ಎಂದು ಸಮಾಜ ಸೇವಕಿ ಜಯಂತಿ ಶೆಟ್ಟಿ ಕರೆ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿ ವಿಭಾಗದ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ಮಡಿಕೇರಿ ಸ್ಥಳೀಯ ಸಂಸ್ಥೆ ಮಟ್ಟದ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದರು. ದೇಶಭಕ್ತಿ ಗಾಯನದ ಮೂಲಕ ಅವರು ವಿದ್ಯಾರ್ಥಿಗಳ ಗಮನ ಸೆಳೆದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಮಾತನಾಡಿ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ದೇಶದ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ದೇಶಾಭಿಮಾನದೊಂದಿಗೆ ಗುರಿ ಸಾಧಿಸಬೇಕು ಎಂದರು.
ಗಾಯನ ಸ್ಪರ್ಧೆಯ ಸ್ಕೌಟ್ಸ್ ವಿಭಾಗದಲ್ಲಿ ಸಂತ ಮೈಕಲರ ಶಾಲೆ ಪ್ರಥಮ, ಸಂತ ಜೋಸೆಫರ ಶಾಲೆ ದ್ವಿತೀಯ, ಗೈಡ್ಸ್ ವಿಭಾಗದಲ್ಲಿ ಸಂತ ಜೋಸೆಫರ ಶಾಲೆಯ ‘ಬಿ’ ತಂಡ ಪ್ರಥಮ, ಸಂತ ಮೈಕಲರ ಶಾಲೆಯ ಇಂಗ್ಲೀಷ್ ಮಾಧ್ಯಮ ವಿಭಾಗ ದ್ವಿತೀಯ, ಬುಲ್ ಬುಲ್ ವಿಭಾಗದಲ್ಲಿ ಸಂತ ಜೋಸೆಫರ ಶಾಲೆ ಪ್ರಥಮ ಬಹುಮಾನ ಗಳಿಸಿತು.
ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಿಕೇರಿಯ ಉಪಾಧ್ಯಕ್ಷೆ ನೀಲಮ್ಮ ಎನ್.ಯು. ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್ ನಿರೂಪಿಸಿ ವಂದಿಸಿದರು. ತೀರ್ಪುಗಾರರಾಗಿ ಹಿರಿಯ ಕಲಾವಿದೆ ಹಾಗೂ ಸಾಹಿತಿ ಶೋಭಾ ಸುಬ್ಬಯ್ಯ, ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಗಾಯಕಿ ಪ್ರೇಮ ಕೃಷ್ಣಪ್ಪ ಕಾರ್ಯ ನಿರ್ವಹಿಸಿದರು.
ಸಂಸ್ಥೆಯ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ತರಬೇತಿ ಆಯುಕ್ತರಾದ ರಂಜಿತ್ ಕೆ.ಯು, ಮೈಥಿಲಿ ರಾವ್, ಸಹಾಯಕ ಆಯುಕ್ತೆ ಸುಲೋಚನ, ಖಜಾಂಚಿ ಎಂ.ಎಸ್.ಶಾAತಿ, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಕಾರ್ಯದರ್ಶಿಗಳಾದ ವಸಂತಿ, ನಳಿನಿ ಸುವರ್ಣ, ಸಹ ಕಾರ್ಯದರ್ಶಿಗಳಾದ ಬೊಳ್ಳಜಿರ ಬಿ.ಅಯ್ಯಪ್ಪ, ಸುಚಿತ ಕಾವೇರಪ್ಪ, ಸದಸ್ಯರುಗಳಾದ ಗುಲ್ಷನ್, ಸೂರಜ್ ತಿಮ್ಮಯ್ಯ, ಲಕ್ಷಿö್ಮÃ ಮತ್ತಿತರರು ಉಪಸ್ಥಿತರಿದ್ದರು.