ಕಣಿವೆ, ಸೆ. ೧೦: ಭಾರತ ದೇಶ ಅಭಿವೃದ್ಧಿ ಹೊಂದುತ್ತಿದ್ದು, ತಂತ್ರಜ್ಞಾನ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ತೋರಲು ವಿದ್ಯಾರ್ಥಿಗಳು ಕಟಿಬದ್ಧರಾಗಬೇಕೆಂದು ಶಾಸಕ ಡಾ. ಮಂತರ್ ಗೌಡ ಕರೆ ನೀಡಿದರು.

ಕುಶಾಲನಗರದ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಕಾಲೇಜಿನ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಪರಿಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕು. ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಉನ್ನತ ಶಿಕ್ಷಣ ಸಚಿವರ ಗಮನ ಸೆಳೆದು ಹೆಚ್ಚಿನ ಅನುದಾನ ತರಲಾಗುವುದು ಎಂದು ಮಂತರಗೌಡ ಭರವಸೆಯಿತ್ತರು.

ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಪರಶಿವಮೂರ್ತಿ, ಹಿರಿಯ ಪ್ರಾಧ್ಯಾಪಕ ಸತೀಶ್ ಕುಮಾರ್, ಡಾ. ಸೀನಪ್ಪ ಇದ್ದರು.