ವೀರಾಜಪೇಟೆ, ಸೆ. ೧೦: ಹಿರಿಯರನ್ನು ಪ್ರತಿಯೊಬ್ಬರು ಕೂಡ ಗೌರವಿಸಬೇಕು ಎಂದು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಪ್ರಧಾನ ಗುರುಗಳು ಹಾಗೂ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜೇಮ್ಸ್ ಡೋಮಿನಿಕ್ ಹೇಳಿದರು.
ಸಂತ ಅನ್ನಮ್ಮ ದ್ವಿ ಶತಮಾನೋತ್ಸವ ಸಭಾಂಗಣದಲ್ಲಿ ಮದರ್ ಥೆರೇಸಾ ಅವರ ಜನ್ಮ ದಿನಾಚರಣೆ ಪ್ರಯುಕ್ತ ವೀರಾಜಪೇಟೆಯ ಮದರ್ ಥೆರೇಸಾ ಸೇವಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಹಿರಿಯರನ್ನು ಗೌರವಿಸುವುದು ಗಮನಾರ್ಹ ವಿಚಾರವಾಗಿದೆ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಪ್ರಶಂಸನೀಯ. ಈ ನಿಟ್ಟಿನಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಸಾಮಾಜಿಕ ಕಳಕಳಿ ಮಹತ್ವದ್ದಾಗಿದೆ ಎಂದರಲ್ಲದೆ ಮತ್ತಷ್ಟು ಸಮಾಜಮುಖಿ ಕಾರ್ಯಗಳು ಸೇವಾ ಕೇಂದ್ರದ ಮುಖಾಂತರ ಜರುಗಲಿ ಎಂದು ಅವರು ಶುಭ ಹಾರೈಸಿದರು.
ಈ ಸಂದರ್ಭ ವಿದ್ಯಾರ್ಥಿಗಳಾದ ಮರಿಯಾ ಕುರಿಯಕೋಸ್, ಏನನ್ ಮೆಂಡೋAಜಾ, ದಿಯಾ, ಜನಿಫರ್ ಅಲ್ವರಿಸ್, ದಿವಿನ ಸಾಲ್ಡನ ಅವರಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.
ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂತ ಅನ್ನಮ್ಮ ಚರ್ಚ್ನ ಸಹಾಯಕ ಗುರುಗಳಾದ ಅಭಿಲಾಶ್, ಬೆಂಗಳೂರುವಿನ ಸಂತ ಜೋಸೆಫರ ಸ್ವಾಯತ್ತ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಮುಖ್ಯಸ್ಥರಾದ ಗಾಡ್ವಿನ್ ಡಿಸೋಜಾ, ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪುರಸ್ಕöÈತೆ ಅರುಣ ಆನ್ಸಿ ಡಿಸೋಜ, ದಂತ ವೈದ್ಯರಾದ ಡಾ. ಮರಿಯ, ಸಮಾಜ ಸೇವಕರಾದ ಲಾರೆನ್ಸ್, ಹಾಡುಗಾರರಾದ ಪಿಯೂಷ್ ಮೆನೇಜಸ್ ಹಾಗೂ ಜಾಯ್ ಪಿ.ಜೆ. ಅವರನ್ನು ಅತಿಥಿಗಳು ಸನ್ಮಾನಿಸಿ ಗೌರವಿಸಿದರು. ೭೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮದರ್ ತೆರೇಸಾ ಸೇವಾ ಕೇಂದ್ರದ ಅಧ್ಯಕ್ಷರು ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಪೆರಿಗ್ರೀನ್ ಎಸ್. ಮಚ್ಚಾಡೋ ಅವರು ಮಾತನಾಡಿ ನಮ್ಮ ಸೇವಾ ಕೇಂದ್ರದ ವತಿಯಿಂದ ಹಿರಿಯ ನಾಗರಿಕರಿಗೆ ಗೌರವವನ್ನು ನೀಡುವುದರ ಜೊತೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. ಧರ್ಮ ಕೇಂದ್ರದ ಭಕ್ತರ ನೆರವಿನಿಂದ ಹಾಗೂ ದಾನಿಗಳ ನೆರವಿನಿಂದ ಈ ಕಾರ್ಯವು ಯಶಸ್ವಿಯಾಗಿ ನಡೆಯುತ್ತಿದೆ. ಮದರ್ ಥೆರೇಸಾ ಸೇವಾ ಕೇಂದ್ರ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು ಸರ್ವರ ನೆರವಿನಿಂದ ಇದು ಸಾಕಾರಗೊಂಡಿದೆ. ಇನ್ನು ಮುಂದೆಯು ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುವ ಉದ್ದೇಶ ಸೇವಾ ಕೇಂದ್ರಕ್ಕಿದೆ. ೨೦೨೧ ರಲ್ಲಿ ಆರಂಭಗೊAಡ ನಮ್ಮ ಸೇವಾ ಕೇಂದ್ರವು ಸಂಪೂರ್ಣವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಹೇಳಿದರು.
ಈ ಸಂದರ್ಭ ೭೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೋರಂಜನಾ ಕ್ರೀಡೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಮದರ್ ತೆರೇಸಾ ಸೇವಾ ಕೇಂದ್ರದ ಸದಸ್ಯರು ಹಾಗೂ ಸದಸ್ಯರ ಮಕ್ಕಳು ಸಾಂಸ್ಕöÈತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಅಗಲಿದ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು.
ವೇದಿಕೆಯಲ್ಲಿ ಮದರ್ ತೆರೇಸಾ ಸೇವಾ ಕೇಂದ್ರದ ಉಪಾಧ್ಯಕ್ಷರಾದ ಮಾರ್ಟಿನ್ ಬರ್ನಾಡ್, ಮದರ್ ತೆರೇಸಾ ಸೇವಾ ಕೇಂದ್ರದ ಸದಸ್ಯರು ಹಾಗೂ ಸಂತ ಅನ್ನಮ್ಮ ಪಾಲಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜೋಕಿಂ ರಾಡ್ರಿಗಸ್, ಉದ್ಯಮಿ ಚೋಪಿ ಜೋಸೆಫ್, ಜೇಮ್ಸ್ ಮೆನೇಜಸ್ ಉಪಸ್ಥಿತರಿದ್ದರು.
ಈ ಸಂದರ್ಭ ಜಾನ್ ಪ್ರಸನ್ನ, ನಿವೃತ್ತ ಪ್ರಾಂಶುಪಾಲರಾದ ಚಾರ್ಲ್ಸ್ ಡಿಸೋಜಾ ಹಾಗೂ ಡೀನ್ ಸಾಲ್ವೋ ಡಿಸೋಜ ಸಂಘದ ಸದಸ್ಯರಾದ ಕೆ.ಟಿ. ಥೋಮಸ್ ಅರುಣ ಆನ್ಸಿ ಡಿಸೋಜಾ, ಅನಿತಾ ನರೋನ, ಮದರ್ ತೆರೆಸಾ ಸೇವಾ ಕೇಂದ್ರದ ಸದಸ್ಯರುಗಳು, ಪದಾಧಿಕಾರಿಗಳು, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.