ಮಡಿಕೇರಿ, ಸೆ. ೧೧: ಕುಶಾಲನಗರ ಸೇರಿದಂತೆ ಇತರ ಜಿಲ್ಲೆಯ ತಾಲೂಕು ಆಸ್ಪತ್ರೆಗಳ ನವೀಕರಣ ಕಾಮಗಾರಿಗೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಶಾಲನಗರ ಸೇರಿ ಮಾಲೂರು, ಕೊರಟಗೆರೆ, ಮಾಗಡಿ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳನ್ನು, ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಹಾಕ್ ಆಸ್ಪತ್ರೆಗಳ ನವೀಕರಣ ಕಾಮಗಾರಿಗಳನ್ನು ಒಟ್ಟು ರೂ.೫೪೨ ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.