ಕಣಿವೆ, ಸೆ. ೧೧: ಕುಶಾಲನಗರದ ಕಾವೇರಿ ನೀರಾವರಿ ನಿಗಮದ ಹಾರಂಗಿ ಅಣೆಕಟ್ಟು ವಿಭಾಗದ ಕಾರ್ಯಪಾಲಕ ಅಭಿಯಂತರರ ಕಚೇರಿ ಸಿಬ್ಬಂದಿ ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕುಶಾಲನಗರದ ವಿದ್ಯುತ್ ಗುತ್ತಿಗೆದಾರ ಪ್ರಸನ್ನಕುಮಾರ್ ಎಂಬವರಿAದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದ್ವಿತೀಯ ದರ್ಜೆ ಹುಣಸೂರಿನ ಆರ್. ಕೃಷ್ಣ ಎಂಬಾತನನ್ನು ಬಂಧಿಸಿದ್ದಾರೆ.

ಘಟನೆಯ ವಿವರ

ಕುಶಾಲನಗರದ ಮುಳ್ಳುಸೋಗೆಯ ಕುವೆಂಪು ಬಡಾವಣೆಯಲ್ಲಿ ಕಾವೇರಿ ನದಿ ದಂಡೆಯಲ್ಲಿ ತಡೆಗೋಡೆ ನಿರ್ಮಾಣ ಸಂಬAಧ ಹಳೆಯ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಒಂದೂವರೆ ಲಕ್ಷ ವೆಚ್ಚದ ಕಾಮಗಾರಿಯನ್ನು ಪೂರೈಸಿ ಒಂದು ವರ್ಷ ಕಳೆದರೂ ಕೂಡ ನೀರಾವರಿ ನಿಗಮದ ಅಧಿಕಾರಿಗಳು ಕಾಮಗಾರಿ ಬಿಲ್ ನೀಡುವಲ್ಲಿ ವಿಳಂಬ ಮಾಡುತ್ತಿದ್ದರು. ಇದಕ್ಕಾಗಿ ರೂ. ೩೦ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಬಳಿಕ ಗುತ್ತಿಗೆದಾರ ಪ್ರಸನ್ನ ಕುಮಾರ್ ಗುರುವಾರ ಮಧ್ಯಾಹ್ನ ಮಡಿಕೇರಿಯ ಲೋಕಾಯುಕ್ತ ಕಚೇರಿಗೆ ತೆರಳಿ ಲಿಖಿತ ದೂರು ಸಲ್ಲಿಸಿದ್ದರು.