ಮಡಿಕೇರಿ, ಸೆ. ೧೧: ಶಾಂತಳ್ಳಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಅಭಿನಂದನಾ ಕಾರ್ಯಕ್ರಮ ತಾ. ೧೪ ರಂದು ನಡೆಯಲಿದೆ.
ಶಾಂತಳ್ಳಿ ಕುಮಾರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ಜಿ. ಮೇದಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ತಾ.ಪಂ. ಮಾಜಿ ಅಧ್ಯಕ್ಷ ಲೋಕೇಶ್ ಕುಮಾರ್, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಕೆ.ಎಸ್. ರಾಮಚಂದ್ರ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಟಿ. ರಾಜಶೇಖರ್, ತಾ.ಪಂ. ಮಾಜಿ ಸದಸ್ಯ ಕೆ.ಎಂ. ಕೃಷ್ಣಕುಮಾರ್, ಗ್ರಾ.ಪಂ. ಅಧ್ಯಕ್ಷೆ ಸವಿತ ವಿಜಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ಸಿ. ಗುರುಪ್ರಸಾದ್, ಪೂರ್ವ ಪ್ರಾಥಮಿಕ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎಸ್. ಮನೋಹರ್, ಕಾರ್ಯದರ್ಶಿ ಪ್ರೇಮ್ ಸಾಗರ್, ಉದ್ಯಮಿ ಬಿ.ಎಂ. ರಾಮಚಂದ್ರ, ಗಿರೀಶ್ ಮಲ್ಲಪ್ಪ, ಮುಖ್ಯ ಶಿಕ್ಷಕ ಪರಮೇಶ್ವರಸ್ವಾಮಿ, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಡಿ. ಬಸವರಾಜು, ಸಾಮಾಜಿಕ ಕಾರ್ಯಕರ್ತ ಮೋಹನ್ ಬೆಂಗಳೂರು, ಮುಖ್ಯ ಭಾಷಣಗಾರರಾಗಿ ವ್ಯಕ್ತಿತ್ವ ವಿಕಸನ ತರಬೇತುದಾರ ಕೆ.ಎಂ. ಮಹೇಶ್ ಶೆಣೈ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.