ಮಡಿಕೇರಿ, ಸೆ. ೧೧: ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ರಾಷ್ಟಿçÃಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ನಗರದ ಅರಣ್ಯ ಭವನದಲ್ಲಿರುವ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛ ಸಮರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಟಿ ಮಾತನಾಡಿ, ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಸರ್ವೋಚ್ಛ ತ್ಯಾಗವನ್ನು ಮಾಡಿ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಹೆಸರುಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚ ಹಸಿರಾಗಿದೆ. ಇವರ ಅಸಾಧಾರಣ ಪ್ರಯತ್ನಗಳು, ಧೈರ್ಯಶೀಲ ಕಾರ್ಯಗಳು ಮತ್ತು ಸರ್ವೋಚ್ಛ ತ್ಯಾಗಗಳು ಅಪಾಯಕ್ಕೊಳಗಾದ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡಲು ಮುಂದಿನ ಪೀಳಿಗೆಗೆ ಸ್ಫೂರ್ತಿದಾಯಕವಾಗಿದೆ ಎಂದು ನುಡಿದರು.

ಸ್ವಾಭಾವಿಕ ಹಾಗೂ ನೈಸರ್ಗಿಕ ಸಂಪನ್ಮೂಲವನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಶ್ರಮಿಸುತ್ತಿದ್ದು, ಅವರಿಗೆ ಎಲ್ಲರೂ ಕೈಜೋಡಿಸಬೇಕು. ಮುಂದಿನ ಪೀಳಿಗೆಗೆ ಅರಣ್ಯ ಸಂಪತನ್ನು ಉಳಿಸಬೇಕು. ಅರಣ್ಯ ಇಲಾಖೆ ವನ್ಯಜೀವಿಗಳ ಹಾವಳಿ ನಿಯಂತ್ರಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದೆ. ಕೆಲವು ಸಂದರ್ಭಗಳಲ್ಲಿ ಯಶಸ್ಸು ಕಾಣುತ್ತೇವೆ. ಕೆಲವು ಸಂದರ್ಭದಲ್ಲಿ ವಿಫಲವೂ ಸಹ ಆಗಿದ್ದೇವೆ. ಅರಣ್ಯ ಸಂರಕ್ಷಣೆ ಜೊತೆಗೆ ಎಲ್ಲಾ ಜನರ ಜೀವ ರಕ್ಷಣೆ ಸಹ ಅತೀ ಮುಖ್ಯ. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ವಿವರಿಸಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಅರಣ್ಯ ಸಂರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದವರನ್ನು ಸದಾ ಸ್ಮರಿಸುವಂತಾಗಬೇಕು. ಅರಣ್ಯ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪರಿಸರ ಉಳಿದಲ್ಲಿ ಜೀವ ವೈವಿಧ್ಯ ಉಳಿಯಲು ಸಾಧ್ಯ. ರಾಷ್ಟçದ ಗಡಿ ಪ್ರದೇಶದಲ್ಲಿ ಸೈನಿಕರು, ರಾಷ್ಟçದ ಒಳಗಡೆ ಆಂತರಿಕವಾಗಿ ಪೊಲೀಸರು ನಾಗರಿಕರ ರಕ್ಷಣೆ ಮಾಡುತ್ತಾರೆ. ಅದೇ ರೀತಿ ೪ಆರ£ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರ ಪ್ರಮುಖವಾಗಿದೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಅಭಿಷೇಕ್ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಹುತಾತ್ಮರಾದ ವಿವಿಧ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಒಟ್ಟು ೬೨ ಅರಣ್ಯ ಹುತಾತ್ಮರ ಹೆಸರು ಓದಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಅರಣ್ಯ ಸೇವೆ ಅಧಿಕಾರಿಯಾಗಿದ್ದ ಪಿ.ಶ್ರೀನಿವಾಸ್ ಅವರು ಆದರ್ಶ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದರು. ಕಾಡಿಗಾಗಿ ಜನನ, ಕಾಡಿಗಾಗಿ ಜೀವನ, ಕಾಡಿಗಾಗಿ ಮರಣ ಎಂಬುದನ್ನೇ ತತ್ವವಾಗಿ ಇಟ್ಟುಕೊಂಡಿದ್ದ ಕನ್ನಡದ ಅರಣ್ಯ ಇಲಾಖೆಯ ವೀರ ಅಭಿಮನ್ಯು ಎಂದೇ ಕರೆಯುತ್ತಿದ್ದರು ಎಂದು ಸ್ಮರಿಸಿದರು.

ಪಿ.ಶ್ರೀನಿವಾಸ್ ಅವರ ಕಾರ್ಯದಕ್ಷತೆ ಮೆಚ್ಚಿ ಭಾರತ ಸರ್ಕಾರವು ಇವರಿಗೆ ‘ಕೀರ್ತಿಚಕ್ರ’ ಎಂಬ ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ ಎಂದರು.

ಉಪ ವಲಯ ಅರಣ್ಯಾಧಿಕಾರಿ ಐಶ್ವರ್ಯ ಆರ್.ಗೌಡ ಅವರು ನಿರೂಪಿಸಿದರು.