ಮಡಿಕೇರಿ, ಸೆ. ೧೧: ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಹೆಚ್ಚುವರಿ ವರ್ಗಾವಣೆಯ ಪಟ್ಟಿಯನ್ನು ಅವೈಜ್ಞಾನಿಕವಾಗಿ ತಯಾರಿಸಿ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಕೌನ್ಸಿಲಿಂಗ್ ಬಹಿಷ್ಕರಿಸಿ ಪ್ರತಿಭಟಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಎದುರು ಪ್ರತಿಭಟಿಸಿದ ಶಿಕ್ಷಕರು ಅವೈಜ್ಞಾನಿಕ ನಿಯಮಕ್ಕೆ ಆಕ್ಷೇಪಿಸಿ ಪಟ್ಟಿಯನ್ನು ಮರುಪರಿಶೀಲಿಸಿ ವೈಜ್ಞಾನಿಕವಾಗಿ ಪಟ್ಟಿ ತಯಾರಿಸಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಒತ್ತಾಯಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕ ಬಿ.ಟಿ. ಪೂರ್ಣೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು.