ಸೋಮವಾರಪೇಟೆ, ಸೆ.೧೨ : ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. ೨೧ರಂದು ಸಮಾಜದ ಸಭಾಂಗಣದಲ್ಲಿ ಕೈಲ್ಪೊಳ್ದ್ ಸಂತೋಷಕೂಟ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಬಿ. ಅಭಿಮನ್ಯುಕುಮಾರ್ ತಿಳಿಸಿದ್ದಾರೆ. ವೀರಾಜಪೇಟೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೊಚ್ಚೇರ ಎ. ನೆಹರು ಆಗಮಿಸಲಿದ್ದಾರೆ. ಸಮಾಜದ ಸದಸ್ಯರಿಗೆ ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಭಿಮನ್ಯುಕುಮಾರ್ ತಿಳಿಸಿದ್ದಾರೆ.