ಮಡಿಕೇರಿ, ಸೆ. ೧೨: ಮಡಿಕೇರಿ ಕೊಡವ ಸಮಾಜದ ವತಿಯಿಂದ ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ಕೈಲ್ ಪೊಳ್ಡ್ ಅಚರಣೆಯನ್ನು ಮಾಡಲಾಯಿತು. ಸಮಾಜದ ಅಧ್ಯಕ್ಷರಾದ ಮಂಡುವAಡ ಪಿ. ಮುತ್ತಪ್ಪ ಅವರು ಅಯುಧ ಪೂಜೆ ಸಲ್ಲಿಸಿದರು
ಸಮಾಜದ ನಿರ್ದೇಶಕರು ಹಾಗೂ ಸಿಬಂದಿ ವರ್ಗದವರು ತೆಂಗಿನಕಾಯಿಗೆ ಗುಂಡು ಹೊಡೆದರು. ನಂತರ ವಿವಿಧ ಕ್ರೀಡೆಯನ್ನು ಆಯೋಜಿಸಲಾಗಿ ವಿಜೇತರಿಗೆ ಬಹುಮಾನ ನೀಡಲಾಯಿತು. ಸಮಾಜದ ಉಪಾಧ್ಯಕ್ಷರಾದ ಕೇಕಡ ವಿಜು ದೇವಯ್ಯ ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಶಾಂತೆಯAಡ ವಿಶಾಲ್ ಕಾರ್ಯಪ್ಪ, ಮಂಡಿರ ಸದಾ ಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಪುತ್ತರಿರ ಕರುಣ್ ಕಾಳಯ್ಯ, ನಂದಿನೆರವAಡ ರವಿ ಬಸಪ್ಪ, ಕನ್ನಂಡ ಕವಿತ ಕಾವೇರಮ್ಮ, ಬೊಪ್ಪಂಡ ಸರಳ ಕರುಂಬಯ್ಯ, ಕಾಂಡೆರ ಲಲ್ಲು ಕುಟ್ಟಪ್ಪ ವ್ಯವಸ್ಥಾಪಕಿ ಮೈನಾ ಬೋಜಮ್ಮ ಹಾಗೂ ಸಿಬ್ಬಂದಿಗಳು ಹಾಜರಿದ್ದರು.