ಮಡಿಕೇರಿ, ಸೆ. ೧೨ : ವೀರಾಜಪೇಟೆಯ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ತಾ. ೨೪ರಂದು ವೀರಾಜಪೇಟೆಯ ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿರುವ ಅಮರ್ ಜವಾನ್ ಸ್ತಂಭದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಯೋಧರ ಸ್ಮಾರಕ ಸ್ತಂಭದ ಆವರಣದಲ್ಲಿ ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಸಶಸ್ತç ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಚವನ್ನು ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ದಿವಂಗತ ಮಾಜಿ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು.

ಮುಖ್ಯ ಅತಿಥಿಗಳಾಗಿ ನಿವೃತ್ತ ಲೇ.ಕ. ಒಲಂಪಿಯನ್ ಬಾಳೆಯಂಡ ಕೆ. ಸುಬ್ರಮಣಿ, ಶಾಸಕರಾದ ಎ.ಎಸ್. ಪೊನ್ನಣ್ಣ, ತಹಶೀಲ್ದಾರ್ ಪ್ರವೀಣ್ ಕುಮಾರ್, ಡಿವೈಎಸ್ಪಿ ಮಹೇಶ್ ಕುಮಾರ್, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮುಖ್ಯಾಧಿಕಾರಿ ಪಟ್ಟಚೆರುವಂಡ ಕೆ. ನಾಚಪ್ಪ ಪಾಲ್ಗೊಳ್ಳಲಿದ್ದಾರೆ. ಬಳಿಕ ೧೧ ಗಂಟೆಗೆ ಮಹಿಳಾ ಸಮಾಜದಲ್ಲಿ ದಾನಿಗಳಿಗೆ ಸನ್ಮಾನ ಹಾಗೂ ಸಂಘದ ಮಹಾಸಭೆ ನಡೆಯಲಿದೆ ಎಂದು ಅಧ್ಯಕ್ಷ ಚಪ್ಪಂಡ ಹರೀಶ್ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.