ಮಡಿಕೇರಿ, ಸೆ. ೧೭: ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ ೨೨ ರಂದು ಬೆಳಗ್ಗೆ ೧೧.೩೦ ಗಂಟೆಗೆ ನಗರದ ಜೂನಿಯರ್ ಕಾಲೇಜು ಆವರಣದ ಕಾಲೇಜು ಸಭಾಂಗಣ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಉನ್ನತ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ. ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ. ಧರ್ಮಜ ಉತ್ತಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ. ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಎಸ್.ಸಿ. ಸತೀಶ್, ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಕಾರ್ಯದರ್ಶಿ ಡಾ.ಕೆ.ಜಿ. ಜಗದೀಶ, ಉನ್ನತ ಶಿಕ್ಷಣ ಸೌಧ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ಮಂಜುಶ್ರೀ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರಾದ ಪ್ರೊ.ಜಿ. ಶೋಭ, ಮಂಗಳೂರು ಪ್ರಾದೇಶಿಕ ಜಂಟಿ ನಿರ್ದೇಶಕರಾದ ಡಾ. ಕೆ.ಆರ್. ಕವಿತ, ಕೊಡಗು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಅಶೋಕ ಎಸ್. ಅಲೂರ, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಎಚ್.ಪಿ. ನಿರ್ಮಲ ಇತರರು ಪಾಲ್ಗೊಳ್ಳಲಿದ್ದಾರೆ.