ಕೂಡಿಗೆ, ಸೆ. ೧೯: ಕುಶಾಲನಗರದ ಬೈಚನಹಳ್ಳಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮ ನಡೆಯಿತು.

ಹಿರಿಯ ವೈದ್ಯಾಧಿಕಾರಿ ಡಾ. ಚೇತನ್ ಅಧ್ಯಕ್ಷತೆಯಲ್ಲಿ ಹೆÀಚ್.ಐ. ವಿ. ಮತ್ತು ಏಡ್ಸ್ ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮವನ್ನು ನಡೆಸಿ ತಪಾಸಣೆಯನ್ನು ನಡೆಸಲಾಯಿತು.

ಜಿಲ್ಲಾ ಕೋ ಆರ್ಡಿನೇಟರ್ ಯಮುನಾ ಮಾತನಾಡಿ, ಹೆಚ್.ಐ.ವಿ. ಮತ್ತು ಏಡ್ಸ್ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವಿಶ್ವಜ್ಞ ಮಾತನಾಡಿ, ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ಜ್ವರದ ಬಗ್ಗೆ ಹಾಗೂ ರಾಷ್ಟಿçÃಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಬಗ್ಗೆ, ಕುಡಿಯುವ ನೀರಿನ ಶುಚಿತ್ವ, ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡದ, ಕ್ಯಾನ್ಸರ್ ಖಾಯಿಲೆ, ಸಕ್ಕರೆ ಖಾಯಿಲೆಯ, ಹೃದಯ ಸಂಬAಧಿ ಖಾಯಿಲೆಗಳ ಬಗ್ಗೆ ಮಾಹಿತಿಯನ್ನು ತಿಳಿಸಿದರು.

ಹಿರಿಯ ಪ್ರಯೋಗಶಾಲಾ ತಂತ್ರಜ್ಞರಾದ ಪುಟ್ಟರಾಜು ಮಾತನಾಡಿ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಯೋಗ ಶಾಲಾ ತಂತ್ರಜ್ಞ ದಿವಾಕರ್, ಪೂರ್ಣವಿ, ಆರೋಗ್ಯ ನಿರೀಕ್ಷಣಾಧಿಕಾರಿ ರಘು, ಸಮುದಾಯ ಆರೋಗ್ಯ ಅಧಿಕಾರಿಗಳಾದ ದೀಪಾ, ರವಿಕುಮಾರ್, ಪ್ರಭು, ಚಕ್ರಾದರ್ ಹಾಗೂ ಆಶಾಕಾರ್ಯಕರ್ತೆ ನಂದಿನಿ ಹಾಜರಿದ್ದರು.