ಸೋಮವಾರಪೇಟೆ, ಸೆ. ೧೯: ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲು ಉದ್ದೇಶಿಸಿರುವ ಬಸವನಕಟ್ಟೆ-ಶಾಂತಳ್ಳಿ ರಸ್ತೆಯ ೨೮೨ ಮೀಟರ್ ರಸ್ತೆ ಅಭಿವೃದ್ಧಿಗೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ೫೦-೫೪ ಅನುಪಾತದ ಅನುದಾನದಡಿ ಬಸವನಕಟ್ಟೆಯಿಂದ ಶಾಂತಳ್ಳಿ ಮಾರ್ಗದ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಪ್ರತಿ ವರ್ಷವು ಈ ಸ್ಥಳದಲ್ಲಿ ರಸ್ತೆ ಗುಂಡಿ ಬಿದ್ದು, ಸಂಚಾರಕ್ಕೆ ಸಮಸ್ಯೆಯಾಗುತ್ತಿತ್ತು. ಇದನ್ನು ಮನಗಂಡು ಸರ್ವಋತು ರಸ್ತೆಯನ್ನಾಗಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು. ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಮಧುಕುಮಾರ್, ವಿಎಸ್‌ಎಸ್‌ಎನ್ ಅಧ್ಯಕ್ಷ ಬಿ.ಈ. ಜಯೇಂದ್ರ, ಪ್ರಮುಖರಾದ ಎಸ್.ಎ. ಪ್ರತಾಪ್, ಗಿರೀಶ್, ರಾಜಪ್ಪ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರ್ ಸೇರಿದಂತೆ ಗ್ರಾಮಸ್ಥರು ಇದ್ದರು.