ಸೋಮವಾರಪೇಟೆ, ಸೆ. ೧೯: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದಲ್ಲಿರುವ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಭಾರತೀಯ ಜನತಾ ಪಾರ್ಟಿಯ ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮನುಕುಮಾರ್ ರೈ, ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶರತ್ಚಂದ್ರ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಇಂದಿರಾ ಮೋಣಪ್ಪ, ಪ.ಪಂ. ಉಪಾಧ್ಯಕ್ಷೆ ಮೋಹಿನಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್. ಮಹೇಶ್, ಮಾಜಿ ಅಧ್ಯಕ್ಷೆ ಸುಮಾ ಸುದೀಪ್, ಬಿಜೆಪಿ ಪ್ರಮುಖರಾದ ಪ್ರಸನ್ನ ನಾಯರ್, ನೆಹರು, ದೇಶ್ರಾಜ್, ಆನಂದ್, ಪ್ರಿಜೇಶ್ ನಾಯರ್ ಅವರುಗಳು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಶೀಘ್ರ ಚೇತರಿಕೆಗೆ ಹಾರೈಸಿದರು.
ಈ ಸಂದರ್ಭ ಆಸ್ಪತ್ರೆಯ ಆಡಳಿತಾಧಿಕಾರಿ ಜಮೀಹ್ ಅಹಮ್ಮದ್, ಸಿಬ್ಬಂದಿಗಳು ಇದ್ದರು.