ಭಾಗಮಂಡಲ, ಸೆ. ೨೦: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಕುಶಾಲನಗರದಲ್ಲಿ ನಡೆದ ಜಿಲ್ಲಾ ಮಟ್ಟದ ೧೭ ವಯೋಮಿತಿಯ ಒಳಗಿನ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಮಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೂಡಿಗೆಯಲ್ಲಿ ನಡೆದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕಿಯರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ಬಾಲಕರು ಪ್ರಥಮ ಸ್ಥಾನ ಪಡೆದು ಚಾಮರಾಜನಗರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ.