ಸಿದ್ದಾಪುರ, ಸೆ. ೨೦: ಸಿದ್ದಾಪುರದ ಶ್ರೀ ಕೃಷ್ಣ ವಿದ್ಯಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸಡಗರ ಸಂಭ್ರಮದಿAದ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ ಕಾರ್ಯಕ್ರಮಗಳು ನಡೆÀದವು. ಪುಟಾಣಿ ಮಕ್ಕಳು ರಾಧೆ ಕೃಷ್ಣೆಯರ ವೇಷಧಾರಿಗಳಾಗಿ ಕಂಡುಬAದರು. ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ವಿದ್ಯಾಮಂದಿರದ ಮುಖ್ಯಸ್ಥರಾದ ಎ.ಎನ್. ರಸಿತ. ಹಾಗೂ ಶಾಲೆಯ ಶಿಕ್ಷಕರು, ಮಕ್ಕಳ ಪೋಷಕರು ಹಾಜರಿದ್ದರು.