ಸುಂಟಿಕೊಪ್ಪ, ಸೆ. ೨೦: ಉತ್ತಮ ಶಿಕ್ಷಕಿ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿರುವ ಜೋವಿಟಾ ವಾಸ್ ಅವರನ್ನು ೭ನೇ ಹೊಸಕೋಟೆಯ ದೀಪ್ತಿ ಶಾಲಾ ವತಿಯಂದ ಸನ್ಮಾನಿಸಿ, ಗೌರವಿಸಲಾಯಿತು.
ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೋವಿವಾಸ್ ಅವರಿಗೆ ತಾ. ೧೪ ರಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೃತ್ಯುಂಜಯ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ವತಿಯಿಂದ ಉತ್ತಮ ಶಿಕ್ಷಕಿ ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಸನ್ಮಾನಿಸಲಾಯಿತು.
ಈ ಸಂದರ್ಭ ಜಿಲ್ಲಾ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸತ್ಯದಾಸ್, ಸೇಕ್ರೆಡ್ ಹಾರ್ಟ್ ಕನ್ಯಾಸ್ತಿçಯರು ಮತ್ತು ಶಾಲೆಯ ಸಹ ಶಿಕ್ಷಕರು ಉಪಸ್ಥಿತರಿದ್ದರು.