ಮಡಿಕೇರಿ, ಸೆ. ೨೦: ಪೋಷಣ್ ಮಾಸಾಚರಣೆ ಅಂಗವಾಗಿ ಸಿಂಕೋನ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಕಾರ್ಯಕ್ರಮ ಮತ್ತು ಅನ್ನಪ್ರಾಶನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಮಾತನಾಡಿ, ಪೋಷಣ್ ಮಾಸಾಚರಣೆಯ ಉದ್ದೇಶ, ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.

ಅತಿಯಾದ ತೂಕ ನಿಯಂತ್ರಣ, ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣದ ಬಗ್ಗೆ ತೂಕದ ಮಹತ್ವದ ಬಗ್ಗೆ ವಿವರವಾಗಿ ತಿಳಿಸಿದರು. ಮೇಲ್ವಿಚಾರಕರು ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅನ್ನಪ್ರಾಶನ ಮತ್ತು ಸೀಮಂತ ಕಾರ್ಯಕ್ರಮವನ್ನು ನಡೆಸಿ ಗರ್ಭಿಣಿ ಮತ್ತು ಮಗುವಿನ ಆರೈಕೆ ಬಗ್ಗೆ, ಪೌಷ್ಟಿಕ ಆಹಾರದ ಬಗ್ಗೆ ವಿವರಿಸಿದರು.

ಅಂಗನವಾಡಿಯಲ್ಲಿ ದೊರೆಯುವ ಆಹಾರಗಳಲ್ಲಿ ಪೌಷ್ಟಿಕ ಆಹಾರ ತಯಾರಿಸಿ ಪ್ರದರ್ಶಿಸಲಾಯಿತು. ಪೌಷ್ಟಿಕ ಆಹಾರದ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಂಗನವಾಡಿ ಕಾರ್ಯಕರ್ತೆ ಸಕೀನಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ವಣಚಲು ಅಂಗನವಾಡಿ ಕಾರ್ಯಕರ್ತೆ ಧರಣಿ ಸ್ವಾಗತವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಮಾಜಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಇಂದಿರಾ, ಸಹಾಯಕಿ ಲಾವಣ್ಯ, ಉಪ ನಿರ್ದೇಶಕರ ಕಚೇರಿಯ ಜಯಂತಿ, ಸರೋಜಾ, ಪುಷ್ಪ, ಧರಣಿ, ಚೇರಂಬಾಣೆ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಿಂಕೋನ ಅಂಗನವಾಡಿ ಕೇಂದ್ರದ ಫಲಾನುಭವಿಗಳು ಪಾಲ್ಗೊಂಡಿದ್ದರು.