ವೀರಾಜಪೇಟೆ, ಸೆ. ೨೦: ವೀರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂರ್ನಾಡು ವಲಯದ ಮರಗೋಡು ಕಾರ್ಯಕ್ಷೇತ್ರದ ಅರೆಕಾಡು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ÷್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಶಿಕ್ಷಕರಾದ ಲತಾ ಅವರು ಮಾತನಾಡಿ ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ. ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ.

ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು.

ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆ ಕಂಡಲ್ಲಿ ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು.

ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ, ಸೇವಾ ಪ್ರತಿನಿಧಿ ಲತಾ ಬಿ.ಎಸ್. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.