ಕೂಡಿಗೆ, ಸೆ. ೨೦: ಪಶು ಆಸ್ಪತ್ರೆ ಕುಶಾಲನಗರ, ಎನ್.ಜಿ.ಓ. ಸಂಸ್ಥೆಯ ವತಿಯಿಂದ ಕುಶಾಲನಗರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಶ್ವ ರೇಬೀಸ್ ಮಾಸಾಚರಣೆಯ ಅಂಗವಾಗಿ ರೇಬೀಸ್ ಜಾಗೃತಿ ಮಾಹಿತಿ ಕಾರ್ಯಾಗಾರವು ನಡೆಯಿತು.
ಕಾರ್ಯಕ್ರಮದಲ್ಲಿ ಮಿಷನ್ ರೇಬೀಸ್ ಸಂಸ್ಥೆ ಸಂಪನ್ಮೂಲ ವ್ಯಕ್ತಿ ಇಂದ್ರಪ್ರಿಯಾ ರೇಬೀಸ್ ರೋಗದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಒದಗಿಸಿದರು.
ಕಾರ್ಯಕ್ರಮದಲ್ಲಿ ಕುಶಾಲನಗರ ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ. ಸಂಜೀವ್ ಕುಮಾರ್ ಆರ್. ಶಿಂಧೆ, ಶರತ್ ಸೇರಿದಂತೆ ಸಿಬ್ಬಂದಿ ವರ್ಗದವರು, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.