ನಾಪೋಕ್ಲು, ಸೆ. ೨೦: ಇಲ್ಲಿಗೆ ಸಮೀಪದ ಚೆರಿಯಪರಂಬು ಆಟದ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬೇತು ಗ್ರಾಮದ ಎಕ್ಸೆಲ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಕ್ರೀಡಾಕೂಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ಶೆಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ನಲ್ಲಿ ತಾನಿಕ್ ತಮ್ಮಯ್ಯ, ಈತನ್ ಪೂವಣ್ಣ, ಆರವ್ ಅಯ್ಯಪ್ಪ ಪ್ರಥಮ ಸ್ಥಾನ, ಪ್ರೌಢ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಹಾಗೂ ಡಬಲ್ಸ್ನಲ್ಲಿ ಚಿನ್ಮಯ್, ನಿಶಾಂತ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ವಿಭಾಗದ ಫುಟ್ಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕ ಅಂಜಪರವAಡ ರೋಶನ್ ಮಾದಪ್ಪ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದಾರೆ.