ಮಡಿಕೇರಿ, ಸೆ. ೨೦ : ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ವೀರಾಜಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ವೀರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದಲ್ಲಿನ ಆರೆಂಜ್ ಫ್ಯಾಮಿಲಿ ಬ್ಯೂಟಿ ಪಾರ್ಲರ್ ಮತ್ತು ಸ್ಟಾ ಎಂಬ ಹೆಸರಿನಲ್ಲಿ ಮಸಾಜ್ ನೆಪದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿ ತಾ. ೧೮ ರಂದು ದಾಳಿ ನಡೆಸಿದ ಪೊಲೀಸರು ೪ ಮಹಿಳೆಯರನ್ನು ರಕ್ಷಣೆ ಮಾಡಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೇರಿಸಿದ್ದಾರೆ. ಅಲ್ಲದೆ ವೇಶ್ಯಾವಾಟಕೆ ನಡೆಸುತ್ತಿದ್ದ ಆರೋಪಿಗಳಾದ ಕೇರಳ ಕಣ್ಣೂರು ಜಿಲ್ಲೆಯ ಪ್ರದೀಪನ್ ಪಿ.ಪಿ. (೪೮), ಕಲೇಶ್ ಕುಮಾರ್ (೪೫), ಶಾಜಿ (೩೮) ಹಾಗೂ ಅಮ್ಮತ್ತಿ ಗ್ರಾಮದ ಎನ್.ಎ. ಪೊನ್ನಣ್ಣ ಇವರುಗಳನ್ನು ಬಂಧಿಸಿ ವೀರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಕಲಂ: ೩, ೪, ೫(ಸಿ) ೭ Immoಡಿಣಚಿಟ ಖಿಡಿಚಿಜಿಜಿiಛಿ (Pಡಿeveಟಿಣioಟಿ) ಂಛಿಣ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್., ವೀರಾಜಪೇಟೆ ಸಿಪಿಐ ಅನೂಪ್ ಮಾದಪ್ಪ ಪಿ., ವೀರಾಜಪೇಟೆ ನಗರ ಪಿಎಸ್‌ಐ ಪ್ರಮೋದ್, ವೀರಾಜಪೇಟೆ ಗ್ರಾಮಾಂತರ ಪಿಎಸ್‌ಐ ಲತಾ ಎನ್.ಜೆ. ಹಾಗೂ ಸಿಬ್ಬಂದಿಗಳ ವಿಶೇಷ ತನಿಖಾ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.