ಸೋಮವಾರಪೇಟೆ, ಸೆ. ೨೦: ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ತಾ.೩೦ ರಂದು ಅಯುಧ ಪೂಜಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುಧ ಪೂಜೆ ಅಂಗವಾಗಿ ತಾ.೨೧ರಂದು(ಇAದು) ಸಂಘದ ಸದಸ್ಯರಿಗೆ ಕ್ರೀಡಾಕೂಟವನ್ನು ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ. ತಾ.೩೦ ರಂದು ಬೆಳಿಗ್ಗೆ ೯.೩೦ ಗಂಟೆಗೆ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸುವ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸಚಿವ ಅಪ್ಪಚ್ಚು ರಂಜನ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉದ್ಯಮಿ ವಿ.ಎಂ.ವಿಜಯ್, ತಹಶೀಲ್ದಾರ್ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರರು ಭಾಗವಹಿಸಲಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ ಸಾರ್ವಜನಿಕ ಆಹ್ವಾನಿತ ತಂಡಗಳಿAದ ನೃತ್ಯ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾನ ನೆರವೇರಲಿದೆ ಎಂದು ಹೇಳಿದರು.
ಸಂಜೆ ೪ ಗಂಟೆಗೆ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಶಾಸಕ ಡಾ.ಮಂತರ್‌ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹರಪಳ್ಳಿ ರವೀಂದ್ರ, ಉದ್ಯಮಿಗಳಾದ ಎನ್.ಎಸ್.ಜಯರಾಂ, ಕೆ.ಟಿ.ಸತೀಶ್, ನಾಪಂಡ ಮುತ್ತಪ್ಪ ಹಾಗೂ ನಾಪಂಡ ಮುದ್ದಪ್ಪ, ಪದ್ಮನಾಭ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್ ಮತ್ತಿತರರು ಭಾಗವಹಿಸಲಿದ್ದಾರೆ. ಸಂಜೆ ೭ ಗಂಟೆಗೆ ವಾಹನಗಳ ಅಲಂಕಾರ ಸ್ಪರ್ಧೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆಯಲಿದೆ. ನಂತರ ಗುರುಕಿರಣ್ ನೈಟ್ಸ್ ತಂಡದಿAದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಕೆ.ಬಿ.ಸುರೇಶ್, ಲ್ಯಾಬ್ ಟೆಕ್ನಿಷಿಯನ್ ವಿನ್ಸಿ ಡಿಸೋಜ, ಕಾಫಿ ಬೆಳೆಗಾರ ಎಚ್.ಪಿ.ವಿನೋದ್, ಪೌರಕಾರ್ಮಿಕ ವೀರೇಶ್ ಅವರುಗಳನ್ನು ಸನ್ಮಾನಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಅಕ್ಟೋಬರ್ ೧ ರಂದು ಬೆಳಿಗ್ಗೆ ೭.೩೦ ಕ್ಕೆ ಪಟ್ಟಣದಲ್ಲಿರುವ ಪ್ರತಿಮೆಗಳಿಗೆ ಮಾಲಾರ್ಪಣೆ, ೯ ಗಂಟೆಗೆ ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ನಡೆಯಲಿದೆ ಎಂದರು. ಗೋಷ್ಠಿಯಲ್ಲಿ ಕಾರ್ಯದರ್ಶಿ ಮಣಿ ಕುಶಾಲಪ್ಪ, ಖಜಾಂಚಿ ಡ್ಯಾನಿ ಡೋಮಿನಿಕ್, ಸಹಕಾರ್ಯದರ್ಶಿ ಎಂ.ಎA.ಕಿರಣ್, ಉಪ ಕಾರ್ಯದರ್ಶಿ ಎಸ್.ಎಂ.ಕೃಷ್ಣ ಇದ್ದರು.