ಮಡಿಕೇರಿ, ಸೆ. ೨೩: ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ ಹಾಗೂ ಇತರ ಕಾರ್ಯಕರ್ತರು ಬಾಲಭವನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಸಚಿವ ಎನ್.ಎಸ್.ಭೋಸರಾಜು, ಸಮಾನತೆಗಾಗಿ ಸರ್ಕಾರ ಹಲವು ಕಾರ್ಯಗಳನ್ನು ಮಾಡುತ್ತಿದೆ. ಇದರ ಒಂದು ಅಂಗವಾಗಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದರು. ಶಾಸಕ ಡಾ.ಮಂತರ್‌ಗೌಡ ಮಾತನಾಡಿ, ‘ಪಕ್ಷದ ಎಲ್ಲ ಘಟಕಗಳು ಉತ್ತಮವಾಗಿದ್ದರೆ ಗೆಲುವು ಸುಲಭ’ ಎಂದರು.

ಮುಖ್ಯಮAತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ, ಅಪ್ರು ರವೀಂದ್ರ ಅವರು ಕಾಂಗ್ರೆಸ್ ಸೇರಿದ್ದಾರೆ. ಜಿಲ್ಲೆಯಲ್ಲಿ ಪಕ್ಷದ ಹಿಂದುಳಿದ ವರ್ಗಗಳ ವಿಭಾಗವನ್ನು ಬಲಪಡಿಸಲಾಗುತ್ತಿದೆ ಎಂದರು. ಕಾಂಗ್ರೆಸ್‌ನ ಹಿರಿಯ ಮುಖಂಡ ಅರುಣ್ ಮಾಚಯ್ಯ, ಮುಖಂಡರಾದ ಬಾನಂಡ ಪೃಥ್ಯು, ಬೇಕಲ್ ರಮಾನಾಥ್, ಸೋಮಣ್ಣ ಪಾಲ್ಗೊಂಡಿದ್ದರು.