ಗೋಣಿಕೊಪ್ಪಲು, ಸೆ. ೨೩: ಜನೋತ್ಸವವಾಗಿ ಆಚರಿಸಲ್ಪಡುವ ಗೋಣಿಕೊಪ್ಪ ದಸರಾ ಆಚರಣೆಗೆ ಮುಂದಿನ ವರ್ಷ ರೂ. ೧ ಕೋಟಿ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಭರವಸೆ ನೀಡಿದರು.

ಪಟ್ಟಣದ ಶ್ರೀ ಕಾವೇರಿ ದಸರಾ ಸಮಿತಿಯಿಂದ ನಡೆದ ೪೭ನೇ ವರ್ಷದ ದಸರಾ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಸಕ ಪೊನ್ನಣ್ಣ ಅವರ ಕೋರಿಕೆ ಮೇರೆ ಈ ವರ್ಷದ ಆಚರಣೆಗೆ ರೂ. ೭೫ ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಅನುದಾನವು ಈಗಾಗಲೇ ಜಿಲ್ಲಾಧಿಕಾರಿ ಖಾತೆಗೆ ಜಮೆ ಆಗಿದೆ. ಲಭ್ಯವಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಚಾಮುಂಡೇಶ್ವರಿ ದೇವಿಯ ಆರಾಧನೆಯೊಂದಿಗೆ ಉತ್ತಮ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ಗೋಣಿಕೊಪ್ಪ ದಸರಾ ಮತ್ತಷ್ಟು ಸಂಭ್ರಮದಿAದ ನಡೆಯುವಂತಾಗಲಿ ಎಂದು ಆಶಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ೪೭ ವರ್ಷಗಳ ಹಿಂದೆ ಹಿರಿಯರ ಪರಿಕಲ್ಪನೆಯಲ್ಲಿ ಆರಂಭಗೊAಡ ಗೋಣಿಕೊಪ್ಪ ದಸರಾ ಇಂದು ಜನೋತ್ಸವವಾಗಿ ಮಾರ್ಪಟ್ಟಿದೆ. ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದರೊಂದಿಗೆ ಜನರಿಗೆ ಮನರಂಜನೆ ಉಣಬಡಿಸಲು ದಸರಾ ಕಾರ್ಯಕ್ರಮ ಪೂರಕವಾಗಿದೆ. ಸರ್ಕಾರವೂ ಗೋಣಿಕೊಪ್ಪ ಜನೋತ್ಸವಕ್ಕೆ ಅನುದಾನವನ್ನು ನೀಡುತ್ತ ಬರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ಹಾಗೂ ಗೋಣಿಕೊಪ್ಪ ದಸರಾಕ್ಕೆ ಅನುದಾನವನ್ನು ಸಕಾಲದಲ್ಲಿ ೪ಏಳನೇ ಪುಟಕ್ಕೆ (ಮೊದಲ ಪುಟದಿಂದ) ಬಿಡುಗಡೆಗೊಳಿಸಿದ್ದಾರೆ ಎಂದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ದಸರಾ ಜನೋತ್ಸವ ಸಂಭ್ರಮ ಹೀಗೆ ಮುಂದುವರೆಯಲಿ ಎಂದು ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ಗೋಣಿಕೊಪ್ಪ ದಸರಾಕ್ಕೆ ತನ್ನದೆ ಆದ ಇತಿಹಾಸವಿದ್ದು, ಇದನ್ನು ಯುವ ಪೀಳಿಗೆ ಮುಂದುವರೆಸಿಕೊAಡು ಹೋಗುತ್ತಿರುವುದು ಶ್ಲಾಘನೀಯ ಎಂದರು.

ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಿಧಾನಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಕಾವೇರಿ ದಸರಾ ಸಮಿತಿಯ ಸಲಹೆಗಾರ ಬಿ.ಎನ್.ಪ್ರಕಾಶ್, ಕಾವೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಕಿರಿಯಮಾಡ ಅರುಣ್ ಪೂಣಚ್ಚ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕಡೇಮಾಡ ಸುನೀಲ್ ಮಾದಪ್ಪ, ಕಾವೇರಿ ದಸರಾ ಸಮಿತಿಯ ಮಾಜಿ ಅಧ್ಯಕ್ಷ ಬಿ.ಡಿ.ಮುಕುಂದ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಎನ್.ಎಸ್.ಕಂದಾ ದೇವಯ್ಯ ಸ್ವಾಗತಿಸಿ, ಮನೆಯಪಂಡ ಶೀಲಾ ಬೋಪಣ್ಣ ನಿರೂಪಿಸಿ, ಚಂದನ ಮಂಜುನಾಥ್ ವಂದಿಸಿದರು.

ಇದೇ ಸಂದರ್ಭ ಸ್ವಾತಂತ್ರö್ಯ ಹೋರಾಟಗಾರರ ಭವನದಲ್ಲಿ ಪ್ರತಿಷ್ಠಾಪಿಸಲಾಗಿರುವ ಚಾಮುಂಡೇಶ್ವರಿ ದೇವಿಗೆ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಪೂಜೆ ಸಲ್ಲಿಸಿದರು.