ಮಡಿಕೇರಿ, ಸೆ. ೨೩: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವÀ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈ ಬಾರಿ ಬಜೆಟ್‌ನಲ್ಲಿ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಲಾಗಿತ್ತು. ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು.

ವೀರಾಜಪೇಟೆಯಲ್ಲಿ ೪೦೦ ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ ೨೫೦ ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ. ಸುಮಾರು ರೂ. ೧೦೫ ಕೋಟಿ ವೆಚ್ಚದಲ್ಲಿ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ವಿವರಿಸಿದರು.

ಹುದಿಕೇರಿಯಲ್ಲಿ ಸುಮಾರು ೬ ಕೋಟಿ ರೂ. ವೆಚ್ಚದಲ್ಲಿ ೩೦ ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ ೪೦ ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿ ಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವೀರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದ ರ್ಜೆಗೇರಿಸುವ ಸಂಬAಧ ೪ಏಳನೇ ಪುಟ ಮಡಿಕೇರಿ, ಸೆ. ೨೩: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವÀ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಈ ಬಾರಿ ಬಜೆಟ್‌ನಲ್ಲಿ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಲಾಗಿತ್ತು. ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು.

ವೀರಾಜಪೇಟೆಯಲ್ಲಿ ೪೦೦ ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ ೨೫೦ ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ. ಸುಮಾರು ರೂ. ೧೦೫ ಕೋಟಿ ವೆಚ್ಚದಲ್ಲಿ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ವಿವರಿಸಿದರು.

ಹುದಿಕೇರಿಯಲ್ಲಿ ಸುಮಾರು ೬ ಕೋಟಿ ರೂ. ವೆಚ್ಚದಲ್ಲಿ ೩೦ ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ ೪೦ ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿ ಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವೀರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದ ರ್ಜೆಗೇರಿಸುವ ಸಂಬAಧ