ಮಡಿಕೇರಿ, ಸೆ. ೨೩: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಎಲ್ಲಾ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಿನ್ನೆಯಿಂದ ಸಮೀಕ್ಷೆ ಆರಂಭಗೊAಡಿದ್ದು, ಮೊದಲ ದಿನ ಜಿಲ್ಲೆಯಲ್ಲಿ ೩೭ ಮನೆಗಳಲ್ಲಿ ಸಮೀಕ್ಷೆ ಮಾಡಲಾಗಿದೆ.
ಅ. ೭ ರವರೆಗೆ ಸಮೀಕ್ಷೆ ನಡೆಯಲಿದ್ದು, ಈ ಕಾರ್ಯಕ್ಕಾಗಿ ೧೨೦೦ಕ್ಕೂ ಅಧಿಕ ಸಿಬ್ಬಂದಿಗಳನ್ನು ತರಬೇತಿ ನೀಡಿ ನಿಯೋಜನೆಗೊಳಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸಿ ಸಮನ್ವಯ ಸಮಿತಿ ರಚಿಸಲಾಗಿದೆ. ಈ ಸಮಿತಿ ಸಮೀಕ್ಷೆ ಕಾರ್ಯ ಸುಗಮ ಹಾಗೂ ವ್ಯವಸ್ಥಿತವಾಗಿ ನಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ.