ವೀರಾಜಪೇಟೆ, ಸೆ. ೨೩: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಂಗಾಲದಲ್ಲಿ ಕಾಡಾನೆಗಳ ಹಿಂಡಿನಿAದಾಗಿ ಬೆಳೆಗಳೆಲ್ಲ ಹಾನಿಯಾಗಿವೆ.
ಕೆದಮುಳ್ಳೂರು, ಪಾಲಂಗಾಲ, ಕರಡ, ನರಿಯಂದಡ, ಗ್ರಾಮದಲ್ಲಿ ಕಳೆದ ಕೆಲವು ತಿಂಗಳುಗಳಿAದ ಕಾಡಾನೆಗಳ ಹಿಂಡು ಗ್ರಾಮದ ಬೆಳೆಗಾರರ ತೋಟಗಳಿಗೆ ಲಗ್ಗೆ ಇಟ್ಟು ದಾಂಧಲೆ ನಡೆಸಿ ಬೆಳೆಗಳನ್ನು ಹಾನಿಪಡಿಸಿದಲ್ಲದೆ ಮುಖ್ಯರಸ್ತೆಯಲ್ಲೇ ರಾಜಾರೋಷವಾಗಿ ಸಂಚರಿಸುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಪಾಲಂಗಾಲ ಗ್ರಾಮದ ಬೆಳೆಗಾರರಾದ ಕರಿನೆರವಂಡ ಶಂಕರಿ ಹಾಗೂ ಇನ್ನಿತರರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಾಳೆ, ಅಡಕೆ, ತೆಂಗು, ಕಾಫಿ, ಕಾಳುಮೆಣಸು ಮತ್ತಿತರ ಕೃಷಿ ಗಿಡಗಳನ್ನು ತುಳಿದು ನಾಶ ಪಡಿಸಿ ಅಪಾರ ನಷ್ಟ ಉಂಟು ಮಾಡಿವೆ. ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದಲ್ಲಿ ಅಳವಡಿಸಲಾಗಿದ್ದ ಸ್ವಿಚ್ಚನ್ನು ಕಿತ್ತೊಗೆದಿವೆ. ನಿರಂತರ ಕಾಡಾನೆಗಳ ಹಾವಳಿಯಿಂದ ಗ್ರಾಮದಲ್ಲಿ ಗ್ರಾಮಸ್ಥರು ನಡೆದಾಡಲೂ ಭಯಪಡುವ ಪರಿಸ್ಥಿತಿ ಉದ್ಭವವಾಗಿದೆ.
ಈ ವ್ಯಾಪ್ತಿಯಲ್ಲಿ ೧೦ಕ್ಕೂ ಅಧಿಕ ಕಾಡಾನೆಗಳು ತೋಟದಲ್ಲೇ ಬೀಡು ಬಿಟ್ಟಿವೆ. ಬೆಳ್ಳಂಬೆಳಿಗ್ಗೆ ಕಾಡಾನೆಗಳು ಜನರ ಕಣ್ಣಿಗೆ ಕಾಣಿಸುತ್ತಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುವ ಮುಖ್ಯ ರಸ್ತೆಯಲ್ಲೇ ರಾಜಾ ರೋಷವಾಗಿ ಸಂಚರಿಸುತ್ತಿವೆ. ದಿನಂಪ್ರತಿ ತೋಟಗಳಿಗೆ ಲಗ್ಗೆ ಇಡುವ ಕಾಡಾನೆಗಳು ಅಪಾರ ಪ್ರಮಾಣದಲ್ಲಿ ಕೃಷಿ ಗಿಡಗಳನ್ನು ತುಳಿದು ನಾಶಪಡಿಸುತ್ತಿವೆ.
ನಿರಂತರ ಕಾಡಾನೆ ಹಾವಳಿ ಕುರಿತಂತೆ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎA. ಪರಮೇಶ್ವರ ಅವರು, ಕೂಡಲೇ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಂಡು ಕಾಡಾನೆ ಗ್ರಾಮಕ್ಕೆ ನುಸುಳದ ರೀತಿಯಲ್ಲಿ ಶಾಶ್ವತ ಪರಿಹಾರ ಒದಗಿಸಬೇಕು. ಅದರಂತೆ ಕಾಡಾನೆ ದಾಳಿಯಿಂದ ನಷ್ಟ ಹೊಂದಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.