ಮಡಿಕೇರಿ, ಸೆ. ೨೩: ಕೊಡಗು ಸಂಪಾಜೆ ಗ್ರಾಮದ ಬೈಲು ಅಂಗನವಾಡಿ ಕೇಂದ್ರದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮಾದೇವಿ ಕಳಗಿ ಅಧ್ಯಕ್ಷತೆಯಲ್ಲಿ ಪೋಷಣೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಪೌಷ್ಟಿಕ ಆಹಾರವನ್ನು ಸೇವಿಸಿ ಮಹಿಳೆಯರು ಮತ್ತು ಮಕ್ಕಳು ಅಪೌಷ್ಟಿಕತೆಯಿಂದ ಹೊರಬರಬೇಕೆಂದು ತಿಳಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಕುಮಾರ್ ಚೆದ್ಕಾರ್ ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಫಲಾನುಭವಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು. ವರ್ತುಲದ ಮೇಲ್ವಿಚಾರಕಿ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಶೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಕ್ಕಳ ಅಪೌಷ್ಟಿಕತೆ ಮಟ್ಟವನ್ನು ಗುರುತಿಸಲು ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿ ತಿಂಗಳು ತೂಕ ಮಾಡಿ ಕಡಿಮೆ ತೂಕ ಇರುವ ಮಕ್ಕಳನ್ನು ಎನ್.ಆರ್.ಸಿ. ಕೇಂದ್ರಕ್ಕೆ ದಾಖಲಿಸುವಂತೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ತಾಲೂಕು ಎಲ್ಎಚ್ವಿ ಸುಮತಿ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ನೀಡುವ ಚುಚ್ಚುಮದ್ದಿನ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲೂಕು ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಶ್ರೀಮತಿ ನೀಲಿಂ ಎಲ್ಲಾ ಫಲಾನುಭವಿಗಳು ಆಧಾರ್ ಕಾರ್ಡಿಗೆ ಫೋನ್ ನಂಬರನ್ನು ಲಿಂಕ್ ಮಾಡಿಸುವುದರ ಮೂಲಕ ಇಲಾಖೆಯ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿಯ ಅಧ್ಯಕ್ಷರು, ಸಂಪಾಜೆ ವರ್ತುಲದ ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳ ತಾಯಂದಿರು, ಪೋಷಕರು, ಆರೋಗ್ಯ ಇಲಾಖೆಯ, ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.