ಸೋಮವಾರಪೇಟೆ, ಸೆ. ೨೩: ಸಮೀಪದ ತೋಳೂರುಶೆಟ್ಟಳ್ಳಿಯ ಸುಭಾಸ್ ನಗರದಲ್ಲಿ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಿದ್ದ ೯ನೇ ವರ್ಷದ ಗೌರಿ ಗಣೇಶ ಉತ್ಸವ ಮೂರ್ತಿಗಳನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.

ಧ್ವನಿವರ್ಧಕ ಹಾಗೂ ಗೊಂಬೆ ಕುಣಿತದೊಂದಿಗೆ ವಿದ್ಯುತ್ ದೀಪಾಲಂಕಾರಗೊAಡ ವಾಹನದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ತೋಳೂರುಶೆಟ್ಟಳ್ಳಿಯ ಬಸವೇಶ್ವರ ದೇವಸ್ಥಾನದ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.

ಈ ಸಂದರ್ಭ ಯುವಕ ಸಂಘದ ಅಧ್ಯಕ್ಷ ಟಿ.ಎನ್. ಬಸವರಾಜು, ಕಾರ್ಯದರ್ಶಿ ಕೆ.ಎಸ್.ನಂದೀಶ್, ಖಜಾಂಚಿ ಸತೀಶ್ (ದಾಮು), ಟಿ.ವಿ. ಅಭಿಜಿತ್, ಚಂದನ್, ರಾಜೇಶ್, ದರ್ಶನ್ ಮತ್ತು ಅರ್ಚಕ ಸುಧಾಕರ್ ಜೈನ್ ಸೇರಿದಂತೆ ಇತರರು ಇದ್ದರು.