ಕುಶಾಲನಗರ, ಸೆ. ೨೪: ೨೦೨೫-೨೬ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ಕೊರತೆ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು.
ತಾಲೂಕು ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಉಪನ್ಯಾಸಕರ ನೇಮಕಾತಿ ವಿವಿಧ ಕಾರಣಗಳಿಂದ ವಿಳಂಬವಾಗುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ.
ಪದವಿ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಸರಕಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸರ್ಕಾರಕ್ಕೆ ತಾಲೂಕು ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿದರು. ಎಬಿವಿಪಿ ಕುಶಾಲನಗರ ತಾಲೂಕು ಸಂಚಾಲಕ ಪ್ರಣವ್, ರತೀಶ್, ಪೂರ್ಣಚಂದ್ರ, ಪ್ರಿಯದರ್ಶಿನಿ ಮತ್ತಿತರರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.