ವೀರಾಜಪೇಟೆ, ಸೆ. ೨೪: ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ. ವೀರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ ನೇತೃತ್ವದಲ್ಲಿ ಪಟ್ಟಣದ ಮೂರ್ನಾಡು ರಸ್ತೆ ಬಳಿ ಮಾನವ ಸರಪಳಿ ರಚಿಸಿ ಒಂದು ಗಂಟೆ ಕಾಲ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಮಾತನಾಡಿ, ರಾಜ್ಯ ಸರ್ಕಾರÀದ ಆಡಳಿತ ಸಂಪೂರ್ಣ ವಿಫಲವಾಗಿದೆ. ರಾಜ್ಯ ಹೆದ್ದಾರಿಯಿಂದ ಹಿಡಿದು ಗ್ರಾಮಗಳಲ್ಲಿ ಇರುವ ರಸ್ತೆಗಳಲ್ಲಿ ಸಂಚಾರ ನಡೆಸಲು ಸಾಧ್ಯವಾಗುತ್ತಿಲ್ಲ. ಕಳೆದ ಬಿ.ಜೆ.ಪಿ. ಸರ್ಕಾರ ಮಾಡಿದ ರಸ್ತೆಗಳನ್ನು ಜನ ಅವಲಂಬಿಸಿದ್ದಾರೆ. ಸರ್ಕಾರದ ಬಿಟ್ಟಿಭಾಗ್ಯಗಳಿಂದ ರಾಜ್ಯ ಅಭಿವೃದ್ದಿ ಶೂನ್ಯವಾಗಿದೆ ಎಂದು ಆರೋಪಿಸಿದರು.
ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ರಸ್ತೆಯಲ್ಲಿ ಗುಂಡಿಯೋ ಅಥವಾ ಗುಂಡಿಯಲ್ಲಿ ರಸ್ತೆ ಇದೆಯೋ ಎಂಬ ಸಂಶಯ ಕಾಡುತ್ತಿದೆ. ರಸ್ತೆಗಳು ಗುಂಡಿ ಬಿದ್ದಿರುವುದರಿಂದ ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ. ಇದನ್ನು ಶಾಸಕರುಗಳೇ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ರಾಜ್ಯ ಸಮಿತಿ ಸದÀಸ್ಯೆ ಪಟ್ಟಡ ರೀನಾ ಪ್ರಕಾಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮನೆಯಪಂಡ ಕಾಂತಿ ಸತೀಶ್, ಮಾಚಿಮಂಡ ಸುವಿನ್ ಗಣಪತಿ ಮಾತನಾಡಿದರು. ಪ್ರತಿಭಟನೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ ಗಣೇಶ್, ನಗರ ಮಾಜಿ ಅಧ್ಯಕ್ಷ ಅಂಜಪರವAಡ ಅನಿಲ್ ಮಂದಣ್ಣ, ಪ್ರಮುಖರಾದ ಪಟ್ರಪಂಡ ರಘು ನಾಣಯ್ಯ, ಕುಂಬೆರ ಮನುಕುಮಾರ್, ಪುರಸಭೆ ಸದಸ್ಯರು ಕಾರ್ಯಕರ್ತರು ಭಾಗವಹಿಸಿದ್ದರು.