ಮಡಿಕೇರಿ, ಸೆ. ೨೪: ಜಿಲ್ಲೆಯಲ್ಲಿ ರಸ್ತೆಗಳು ತೀವ್ರ ಹದಗೆಟ್ಟರೂ ಸರಕಾರ, ಶಾಸಕರು ಸೂಕ್ತ ಕ್ರಮವಹಿಸದೆ ನಿರ್ಲಕ್ಷö್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕುಟ್ಟ, ನಾಪೋಕ್ಲು, ಕುಶಾಲನಗರ ಹಾಗೂ ವೀರಾಜಪೇಟೆಯಲ್ಲಿ ಏಕಕಾಲದಲ್ಲಿ ಪ್ರತಿಭಟನೆ ಕೈಗೊಂಡ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರಿದರು. ರಸ್ತೆ ತಡೆ ನಡೆಸಿದ್ದಲ್ಲದೆ ಗುಂಡಿ ಬಿದ್ದ ರಸ್ತೆಗಳಿಗೆ ಗಿಡ ನೆಟ್ಟು ಆಡಳಿತವನ್ನು ಅಣಕಿಸಿದರು. ಕೆಲವೆಡೆ ಗುಂಡಿಗಳನ್ನು ಬಿಜೆಪಿ ಕಾರ್ಯಕರ್ತರೆ ಮುಚ್ಚಿ ಸರಕಾರಕ್ಕೆ ಬಿಸಿ ಮುಟ್ಟಿಸಿದರು.

ÀÄಟ್ಟದಲ್ಲಿ ಬಿಜೆಪಿ ಪ್ರತಿಭಟನೆ

ಗೋಣಿಕೊಪ್ಪಲು, ಸೆ. ೨೪: ಕಾಂಗ್ರೆಸ್ ಸರ್ಕಾರ ಬಂದ ನಂತರ ಮೂಲಭೂತ ಸೌಕರ್ಯಗಳನ್ನು ಕಡೆಗಣಿಸಿ ‘ಗುಂಡಿಗಳ ಊರನ್ನಾಗಿಸಿರುವುದೇ ಕಾಂಗ್ರೆಸ್ ಪಕ್ಷದ ಸಾಧನೆ ಎಂದು ಬಿಜೆೆಪಿ ಪ್ರಮುಖರು ಆರೋಪಿಸಿದರು.

ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಪೊನ್ನಣ್ಣ ಅವರು ಆಯ್ಕೆಯಾದ ನಂತರ ಮಾಡಿದ ಸಾಧನೆಗಳೇನು.? ಕೇಂದ್ರ ಸರ್ಕಾರದ ಅನುದಾನವನ್ನು ತನ್ನ ಅನುದಾನವೆಂದು ಬಿಂಬಿಸುತ್ತ ಸಾಮಾಜಿಕ ಜಾಲತಾಣದ ಮೂಲಕ ಪ್ರಚಾರ ಗಿಟ್ಟಿಸಿ ೨೫ ವರ್ಷದ ನಂತರ ಅಭಿವೃದ್ಧಿ ಕಾಣುತ್ತಿದೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕೊಡಗಿನ ರಸ್ತೆಗಳು ಯಾವ ಮಟ್ಟದಲ್ಲಿದೆ ಎಂಬುವುದು ಅರಿವಾಗುತ್ತಿಲ್ಲವೆ..? ಸರ್ಕಾರದಲ್ಲಿ ಬಹುದೊಡ್ಡ ಹುದ್ದೆಯನ್ನು ಹೊಂದಿದ್ದರೂ ರಸ್ತೆ ಅಭಿವೃದ್ಧಿಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಗುಂಡಿ ಬಿದ್ದ ರಸ್ತೆಯಲ್ಲಿ ವಾಹನ ಸಂಚಾರ ಮಾಡಲು ಸಾಧ್ಯವಾಗದ ಪರಿಸ್ಥಿತಿ ಕೊಡಗು ಜಿಲ್ಲೆಯಲ್ಲಿ ನಿರ್ಮಾಣವಾಗಿದೆ ಎಂದರು. ಬಿಜೆಪಿ ಸರ್ಕಾರವಿದ

ರಸ್ತೆ ಗುಂಡಿ ಮುಚ್ಚಿದ ಬಿಜೆಪಿ ಕಾರ್ಯಕರ್ತರು ಕುಶಾಲನಗರ, ಸೆ. ೨೪: ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಸರಕಾರ ಎನಿಸಿಕೊಂಡಿದೆ ಎಂದು ಮಾಜಿ ಶಾಸಕ ಎಂ. ಪಿ ಅಪ್ಪಚ್ಚು ರಂಜನ್ ಅಭಿಪ್ರಾಯ ಕಿಡಿಕಾರಿದರು.

ಕುಶಾಲನಗರದಲ್ಲಿ ಗುಂಡಿ ಬಿದ್ದ ರಸ್ತೆಗಳನ್ನು ಮುಚ್ಚುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯದ ಯಾವುದೇ ನಗರ ಪಟ್ಟಣಗಳ ರಸ್ತೆಗಳು ಸೇರಿದಂತೆ ಹೆದ್ದಾರಿ ರಸ್ತೆಗಳ ನಿರ್ವಹಣೆ, ಅಭಿವೃದ್ಧಿ ಕಾಮಗಾರಿ ನಡೆಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷö್ಯ ತಾಳುತ್ತಿದೆ. ರಸ್ತೆಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ತೊಡಕು ಉಂಟಾಗಿದೆ. ಹಿಂದಿನ ಸರ್ಕಾರ ಕೊಡಗು ಜಿಲ್ಲೆಗೆ ರಸ್ತೆ ಅಭಿವೃದ್ಧಿಗಾಗಿ ೩೦೦ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು ಪ್ರಸಕ್ತ ಸರ್ಕಾರ ಪುಕ್ಕಟೆ ಪ್ರಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಅರಣ್ಯೀಕರಣ ಹೆಸರಿನಲ್ಲಿ ಏಕಾಏಕಿ ಸಿ ಆ್ಯಂಡ್ ಡಿ ಲ್ಯಾಂಡ್ ವರ್ಗಾವಣೆ ಮಾಡುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ.