ಚೆಯ್ಯಂಡಾಣೆ, ಸೆ. ೨೪: ಮಿತವಾದ ಆಹಾರ ಸೇವನೆ, ಆರೋಗ್ಯಕರ ಚಟುವಟಿಕೆಯಿಂದ ಮಾತ್ರ ಆರೋಗ್ಯ ಸುಧಾರಣೆ ಸಾಧ್ಯವೆಂದು ಆಹಾರ ಸುರಕ್ಷತಾ ಸಹಾಯಕ ಅಧಿಕಾರಿ ಮಂಜುನಾಥ್ ಅಭಿಪ್ರಾಯಪಟ್ಟರು.
ಕೋಪಟ್ಟಿ ಸಮೀಪದ ಚೆರಂಡೇಟಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನದ ಅಡಿಯಲ್ಲಿ ಅರಿವು ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮತೋಲನ ಆಹಾರದ ಕುರಿತು ಒಂದು ಕಾರ್ಯಕ್ರಮಕ್ಕೆ ಸೀಮಿತ ವಾಗದೆ ಪ್ರತಿದಿನದ ಬದುಕಿನ ಭಾಗವಾಗಬೇಕು. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಾಧಿಸಲು ಮುಂಜಾಗ್ರತೆ ವಹಿಸುವಂತೆ ಮಾಹಿತಿ ನೀಡಿದರು.
ಮಡಿಕೇರಿ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ. ಶ್ರೀನಾಥ್ ಮಾತನಾಡಿ, ಪ್ರತಿದಿನದ ಆಹಾರದಲ್ಲಿ ಸಮತೋಲನ ಆಹಾರ ಸೇವನೆ ಅಗತ್ಯವಾಗಿದೆ ಎಂದರು.
ಬಾಲವಿಕಾಸ ಸಮಿತಿ ಅಧ್ಯಕ್ಷೆ ದಿವ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರ ವ್ಯಾಪ್ತಿಯ ಗರ್ಭಿಣಿಯರಿಗೆ ಮಡಿಲು ತುಂಬಿ ಸೀಮಂತ ನೆರವೇರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಉಮಾಶ್ರೀ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿದರು. ಈ ಸಂದರ್ಭ ಕಾರ್ಯಕ್ರಮ ಜಿಲ್ಲಾ ಎಪಿಡಿ ಮಾಲಿಜಿಸ್ಟ್ ಕಿಶೋರ್, ಹೇಮಂತ್, ಆಶಾ ಕಾರ್ಯಕರ್ತೆ ಚಂದ್ರಾವತಿ, ಶಾಲಾ ಶಿಕ್ಷಕಿಯರಾದ ಪುಷ್ಪವತಿ, ಚೈತ್ರ ಮತ್ತಿತರರು ಹಾಜರಿದ್ದರು.