ಮಡಿಕೇರಿ, ಸೆ. ೨೪: ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ, ಕಾದಂಬರಿಕಾರ ಪ್ರೊ.ಎಸ್.ಎಲ್.ಭೈರಪ್ಪ (೯೪) ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟೊçÃತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಕುವೆಂಪುನಗರದ ಉದಯರವಿ ರಸ್ತೆಯಲ್ಲಿರುವ ನಿವಾಸದಲ್ಲಿದ್ದ ಅವರು ೬ ತಿಂಗಳಿನಿAದ ಅನಾರೋಗ್ಯದಿಂದ ಬಳಲುತ್ತಿದ್ದರು.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ೧೯೩೪ ಆಗಸ್ಟ್ ೨೦ರಂದು ಲಿಂಗಣ್ಣಯ್ಯ - ಗೌರಮ್ಮ ದಂಪತಿಯ ಪುತ್ರರಾಗಿ ಜನಿಸಿದ ಅವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ೨ ಚಿನ್ನದ ಪದಕಗಳೊಂದಿಗೆ ಎಂ.ಎ ತತ್ವಶಾಸ್ತçದಲ್ಲಿ ಪದವಿ ಪಡೆದಿದ್ದರು. ಬರೋಡದ ಸಯ್ಯಾಜಿರಾವ್ ವಿಶ್ವವಿದ್ಯಾಲಯದಲ್ಲಿ ‘ಸತ್ಯ ಮತ್ತು ಸೌಂದರ್ಯ’ ಪ್ರಬಂಧಕ್ಕೆ ಪಿ.ಎಚ್ಡಿ ಪದವಿ ಪಡೆದ ನಂತರ ಅವರು, ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜು, ಗುಜರಾತ್ನ ಸರ್ದಾರ್ ವಲ್ಲಭಬಾಯಿ ಪಟೇಲ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು.
೨೦೧೫ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್ ಗೌರವಕ್ಕೆ ಭಾಜನರಾಗಿದ್ದ ಅವರಿಗೆ ಕೇಂದ್ರ ಸರ್ಕಾರವು ೨೦೧೬ರಲ್ಲಿ ಪದ್ಮಶ್ರೀ, ೨೦೨೩ರಲ್ಲಿ ಪದ್ಮಭೂಷಣ ಪುರಸ್ಕಾರ ನೀಡಿತ್ತು. ಭೈರಪ್ಪ ಅವರ ಕಾದಂಬರಿಗಳು ಭಾರತದ ವಿವಿಧ ಭಾಷೆಗಳಿಗೆ ಅನುವಾದವಾಗಿವೆ. ವಂಶವೃಕ್ಷ, ಸಾಕ್ಷಿ ಮತ್ತು ಪರ್ವ ಕೃತಿಗಳು ಇಂಗ್ಲಿಷ್ಗೆ ಭಾಷಾಂತರಗೊAಡಿವೆ. ಹಲವು ಕೃತಿ ಸಿನಿಮಾವಾಗಿದೆ.
ತಾ. ೨೫ ರಂದು (ಇಂದು) ಹುಟ್ಟೂರು ಸಂತೇಶಿವರದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.