ಸಿದ್ದಾಪುರ, ಸೆ. ೨೪: ಕಾಡಾನೆಗಳ ಹಿಂಡು ಕಾಫಿ ತೋಟದೊಳಗೆ ಬೀಡು ಬಿಟ್ಟು ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ನಾಶಗೊಳಿಸಿದ ಘಟನೆ ಕರಡಿ ಗೋಡು ಗ್ರಾಮದಲ್ಲಿ ನಡೆದಿದೆ.

ಕರಡಿಗೋಡು ಗ್ರಾಮದ ಕುಕ್ಕುನೂರು ಪ್ರಕಾಶ್ ಮತ್ತು ಚೇತನ್ ಅವರ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಮರಿಯಾನೆಗಳು ಸೇರಿದಂತೆ ೧೩ಕ್ಕೂ ಅಧಿಕ ಕಾಡಾನೆಗಳು ಕಾಫಿ ತೋಟಗಳಲ್ಲಿ ದಾಂಧÀಲೆ ನಡೆಸಿ ಅಡಿಕೆ ಮರಗಳನ್ನು ಹಾಗೂ ಕಾಫಿ ಗಿಡಗಳನ್ನು ಧ್ವಂಸಗೊಳಿಸಿವೆ. ಇದಲ್ಲದೆ ದಿ. ಪುರುಷೋತ್ತಮ ಎಂಬವರ ತೋಟಕ್ಕೂ ನುಗ್ಗಿದ ಕಾಡಾನೆಗಳು ಮನೆ ಅಂಗಳಕ್ಕೆ ಲಗ್ಗೆ ಇಟ್ಟು, ಅಂಗಳದಲ್ಲಿದ್ದ ಹೂಕುಂಡÀÀಗಳಿಗೆ ಹಾನಿ ಮಾಡಿದೆ. ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದÀರೂ ಕೂಡ ಕಾಡಾನೆಗಳು ಹಿಂತಿರುಗಿ ಬರುತ್ತಿವೆ. ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.