ಮಡಿಕೇರಿ: ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮದಲ್ಲಿನ ಅಂಗನವಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ವತಿಯಿಂದ ಮಾದಕ ಮುಕ್ತ ಅಭಿಯಾನ, ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ವಿಕ್ರಮ್ ಆರ್. ಮರೆವು ಕಾಯಿಲೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ವಾಕ್ ಮತ್ತು ಶ್ರವಣ ಚಿಕಿತ್ಸಕಿ ಕಾವ್ಯ ಎಸ್. ಅವರು ಮೆದುಳಿನ ಆರೋಗ್ಯವನ್ನು ಕುರಿತು ನೆರೆದಿದ್ದ ಜನರಿಗೆ ಮಾಹಿತಿ ನೀಡಿದರು,
ಗ್ರಾಮ ಪಂಚಾಯಿತಿ ಪಿಡಿಓ ಮಮತಾ ಅವರು ಸ್ವಚ್ಛತೆ ಕುರಿತು ಪ್ರಮಾಣ ವಚನವನ್ನು ಬೋಧಿಸಿದರು ಹಾಗೂ ಸ್ವಚ್ಛತೆ ಮತ್ತು ಮಾದಕ ಮುಕ್ತ ಅಭಿಯಾನದ ಕುರಿತು ಮಾಹಿತಿ ನೀಡಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪೌಷ್ಟಿಕ ಆಹಾರ, ತೂಕದ ಮಹತ್ವ, ಇಲಾಖೆಯ ಯೋಜನೆಗಳ ಬಗ್ಗೆ, ಅಂಗನವಾಡಿ ಕೇಂದ್ರಗಳಲ್ಲಿ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ನಮೃತ ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯದವರಿಗೆ ಗರ್ಭಿಣಿ, ಬಾಣಂತಿಯರಿಗೆ ಬಿಪಿ, ಶುಗರ್ ಪರಿಶೀಲನೆ ಮಾಡಿದರು. ಪ್ರತಿ ವರ್ಷ ಎಲ್ಲಾ ಮಹಿಳೆಯರು ತಪ್ಪದೆ ಬಿಪಿ ಶುಗರ್ ಪರಿಶೀಲನೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.
ಮೂರ್ನಾಡು ಹಿರಿಯ ಮಹಿಳಾ ಆರೋಗ್ಯ ಸಂದರ್ಶಕಿ ಹೇಮಲತಾ ಆರೋಗ್ಯ ಇಲಾಖೆಯ ಇಲಾಖೆಯಿಂದ ಸಿಗುವ ಸೌಲಭ್ಯ ಕುರಿತು ಮಾಹಿತಿ ನೀಡಿದರು. ಕಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತ ಶಿಲ್ಪಮೊಳ್ ತಾಯಿ ಕಾರ್ಡ್ನಲ್ಲಿ ಸಿಗುವಂತ ಎಲ್ಲಾ ಸೌಲಭ್ಯಗಳನ್ನು ವಿವರಿಸಿದರು ಮೇಕೇರಿ ಅಂಗನವಾಡಿ ಕಾರ್ಯಕರ್ತೆ ಹೇಮಾ ರವರು ಪ್ರಾರ್ಥನೆ ಮತ್ತು ನಿರೂಪಣೆಯನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮೇಕೇರಿಯ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು, ಪುಷ್ಪ ಮೂರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿ ಬೇಬಿ ಪಾಲ್ಗೊಂಡಿದ್ದರು.ಮಡಿಕೇರಿ: ಮಡಿಕೇರಿ ತಾಲೂಕಿನ ಮೇಕೇರಿ ಗ್ರಾಮದಲ್ಲಿನ ಅಂಗನವಾಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ವತಿಯಿಂದ ಮಾದಕ ಮುಕ್ತ ಅಭಿಯಾನ, ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಡಿಕೇರಿ ಜಿಲ್ಲಾ ಆಸ್ಪತ್ರೆಯ ವಿಕ್ರಮ್ ಆರ್. ಮರೆವು ಕಾಯಿಲೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ವಾಕ್ ಮತ್ತು ಶ್ರವಣ ಚಿಕಿತ್ಸಕಿ ಕಾವ್ಯ ಎಸ್. ಅವರು ಮೆದುಳಿನ ಆರೋಗ್ಯವನ್ನು ಕುರಿತು ನೆರೆದಿದ್ದ ಜನರಿಗೆ ಮಾಹಿತಿ ನೀಡಿದರು,
ಗ್ರಾಮ ಪಂಚಾಯಿತಿ ಪಿಡಿಓ ಮಮತಾ ಅವರು ಸ್ವಚ್ಛತೆ ಕುರಿತು ಪ್ರಮಾಣ ವಚನವನ್ನು ಬೋಧಿಸಿದರು ಹಾಗೂ ಸ್ವಚ್ಛತೆ ಮತ್ತು ಮಾದಕ ಮುಕ್ತ ಅಭಿಯಾನದ ಕುರಿತು ಮಾಹಿತಿ ನೀಡಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರು ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪೌಷ್ಟಿಕ ಆಹಾರ, ತೂಕದ ಮಹತ್ವ, ಇಲಾಖೆಯ ಯೋಜನೆಗಳ ಬಗ್ಗೆ, ಅಂಗನವಾಡಿ ಕೇಂದ್ರಗಳಲ್ಲಿ ಸಿಗುವಂತ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯ ಅಧಿಕಾರಿ ನಮೃತ ಅಂಗನವಾಡಿ ಕಾರ್ಯಕರ್ತೆಯರು, ಸಮುದಾಯದವರಿಗೆ ಗರ್ಭಿಣಿ, ಬಾಣಂತಿಯರಿಗೆ ಬಿಪಿ, ಶುಗರ್ ಪರಿಶೀಲನೆ ಮಾಡಿದರು. ಪ್ರತಿ ವರ್ಷ ಎಲ್ಲಾ ಮಹಿಳೆಯರು ತಪ್ಪದೆ ಬಿಪಿ ಶುಗರ್ ಪರಿಶೀಲನೆ ಮಾಡಿಕೊಳ್ಳುವುದರಿಂದ ಆಗುವ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು.
ಮೂರ್ನಾಡು ಹಿರಿಯ ಮಹಿಳಾ ಆರೋಗ್ಯ ಸಂದರ್ಶಕಿ ಹೇಮಲತಾ ಆರೋಗ್ಯ ಇಲಾಖೆಯ ಇಲಾಖೆಯಿಂದ ಸಿಗುವ ಸೌಲಭ್ಯ ಕುರಿತು ಮಾಹಿತಿ ನೀಡಿದರು. ಕಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತ ಶಿಲ್ಪಮೊಳ್ ತಾಯಿ ಕಾರ್ಡ್ನಲ್ಲಿ ಸಿಗುವಂತ ಎಲ್ಲಾ ಸೌಲಭ್ಯಗಳನ್ನು ವಿವರಿಸಿದರು ಮೇಕೇರಿ ಅಂಗನವಾಡಿ ಕಾರ್ಯಕರ್ತೆ ಹೇಮಾ ರವರು ಪ್ರಾರ್ಥನೆ ಮತ್ತು ನಿರೂಪಣೆಯನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮೇಕೇರಿಯ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು, ಪುಷ್ಪ ಮೂರ್ನಾಡು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿ ಬೇಬಿ ಪಾಲ್ಗೊಂಡಿದ್ದರು.ಚೆಟ್ಟಳ್ಳಿ: ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಗ್ರಾಮದಲ್ಲಿ, ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಚೆಟ್ಟಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ವ್ಯವಸ್ಥಾಪಕರು ವಿಷ್ಣು ಮಾತನಾಡಿ, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದು ಕೊಳ್ಳುವಂತೆ ಸಲಹೆ ನೀಡಿದರು.
ನಂತರ ಆರ್ಥಿಕ ಸಮಾಲೋಚಕ ನಬಿ ಮಾತನಾಡಿ, ಪ್ರತಿಯೊಬ್ಬರು ಕೆವೈಸಿ ಕಡ್ಡಾಯವಾಗಿ ಮಾಡಿಸುವಂತೆ ತಿಳಿಸಿದರು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ನ ಆರ್ಥಿಕನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತಿ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದು ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್‌ಗಳ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದು ಆರ್ಥಿಕ ಸಮಾಲೋಚಕ ಹರೀಶ್ ಸಿ.ಜಿ. ತಿಳಿಸಿದರು.
ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕ ಆಸೀಫ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ವೇದಿಕೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ಹರೀಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಪೊನ್ನಂಪೇಟೆ: ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಕಲ್ಲುಕೋರೆ ಅಂಗನವಾಡಿ ಕೇಂದ್ರದಲ್ಲಿ ಸೀಮಂತ ಹಾಗೂ ಅನ್ನಪ್ರಾಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೇಣುಕಾ ಹೊಸಮನಿ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಉದ್ದೇಶ, ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.
ಸಂಯೋಜಕಿ ತಂಗಮ್ಮ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಇಲಾಖೆಯ ಸಿಬ್ಬಂದಿಯವರು ಮತ್ತು ಹಿರಿಯರಾದ ಬಿ.ಕೆ. ನಳಿನಾಕ್ಷಿ ಮತ್ತು ಮಕ್ಕಳ ಪೋಷಕರು, ಅಂಗನವಾಡಿ ಸಹಾಯಕಿ, ಗರ್ಭಿಣಿ ಬಾಣಂತಿಯರು (ಕಿಶೋರಿಯರು), (ಹದಿಹರೆಯದ ಹೆಣ್ಣು ಮಕ್ಕಳು ಹಾಜರಿದ್ದರು. ಬೇಗೂರು ೨ ಅಂಗನವಾಡಿ ಕಾರ್ಯಕರ್ತೆ ಶಂಶೀನ ಹಾಜರಿದ್ದರು.
ಆರೋಗ್ಯ ಇಲಾಖೆಯ ಲಕ್ಷಿö್ಮ ಹಾಗೂ ಆಶಾ ಕಾರ್ಯಕರ್ತೆ ನಳಿನಿ, ಆರೋಗ್ಯ ಇಲಾಖೆಯ ಸೌಲಭ್ಯಗಳ ಬಗ್ಗೆ ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆ ರಾಣಿ ನಿರೂಪಿಸಿ, ಸ್ವಾಗತಿಸಿದರು.ಐಗೂರು: ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ಐಗೂರು ಇವರ ಸಹಯೋಗದೊಂದಿಗೆ ಐಗೂರಿನ ಪ.ಪೂ. ಕಾಲೇಜಿನಲ್ಲಿ ಸ್ವಸ್ತ ನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮ ನಡೆಯಿತು.
ಗ್ರಾ.ಪಂ. ಪಿಡಿಓ ಪೂರ್ಣ ಕುಮಾರ್ ಮಾತನಾಡಿ, ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಯ ಬಗ್ಗೆ ಎಲ್ಲರಿಗೂ ಅರಿವಿರಬೇಕು. ಸಮಾಜದಲ್ಲಿ ಕೆಲವು ದುಷ್ಪರಿಣಾಮ ಉಂಟಾದರೆ ಕಾಯ್ದೆಯಲ್ಲಿರುವ ಕಾನೂನನ್ನು ಎದುರಿಸಬೇಕಾಗುತ್ತದೆ ಎಂದರು.
ಬಿಳಿಗೇರಿ ಪ್ರಾ.ಆ. ಕೇಂದ್ರದ ವೈದ್ಯಾಧಿಕಾರಿ ಡಾ. ಸಿದಾನ್ ಮಹಮ್ಮದ್ ಹದಿಹರೆಯದ ಬಾಲ್ಯದ ಬಗ್ಗೆ ಮಾತನಾಡಿದರೆ, ಕುಶಾಲನಗರದ ಸಿ.ಎಚ್.ಸಿ. ಸೆಂಟರ್‌ನ ಆರ್‌ಕೆಎಸ್‌ಕೆ ಕೌನ್ಸಿಲರ್ ಶ್ರೀಲತಾ ರಾಷ್ಟಿçÃಯ ಕಿಶೋರ್ ಸ್ವಸ್ಥ ಕಾರ್ಯಕ್ರಮದ ಕುರಿತು ಮಾತನಾಡಿದರು. ಪೂಪತಿ ಶಾಲಾ ಚುಚ್ಚುಮದ್ದಿನ ಕಾರ್ಯಕ್ರಮ ಮತ್ತು ಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ನೀರಿನ ಮಾದರಿ, ಉಪ್ಪಿನ ಮಾದರಿ ಪರೀಕ್ಷೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪಿ.ಡಿ.ಓ. ಪೂರ್ಣ ಕುಮಾರ್, ಡಾ. ಮಹಮದ್, ಯಶ್ವಂತ್, ಆರ್.ಕೆ.ಎಸ್. ಕೆನ ಶ್ರೀಲತಾ, ಶಿಕ್ಷಕಿಯರಾದ ರೇಖಾ, ರಂಜಿನಿ, ಆಶಾ ಕಾರ್ಯಕರ್ತೆ ಇಂದಿರಾ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಚೆಯ್ಯಂಡಾಣೆ: ನಿತ್ಯ ಜೀವನದಲ್ಲಿ ಪ್ರತಿಯೊಬ್ಬರೂ ಪೌಷ್ಟಿಕ ಆಹಾರಗಳನ್ನು ಸೇವಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಬಾರ ಯೋಜನಾಧಿಕಾರಿ ಶೀಲಾ ಅಶೋಕ್ ಅಭಿಪ್ರಾಯಪಟ್ಟರು.
ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕುಂದಕಾಡು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಕ್ತಹೀನತೆ, ಅಪೌಷ್ಟಿಕತೆಯನ್ನು ತಡೆಗಟ್ಟಬೇಕು ಎಂದರು.
ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಮಾತನಾಡಿ, ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳು ಚುಚ್ಚುಮದ್ದುಗಳನ್ನು ಸರಿಯಾದ ಸಮಯಕ್ಕೆ ಹಾಕಿಸಿಕೊಳ್ಳಬೇಕು. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ ದಾಖಲಾತಿಗಳು ಇದ್ದಾಗ ಮಾತ್ರ ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ನಡೆಸಲಾಯಿತು.
ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆ ಆಶಾಲತಾ, ಆಶಾ ಕಾರ್ಯಕರ್ತೆ ಚಂದ್ರಕಲಾ, ಸಹಾಯಕಿ ರಾಧ, ನಾಪೋಕ್ಲು ವೃತ್ತದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೋಷಕರು, ಮಕ್ಕಳು ಹಾಜರಿದ್ದರು. ಆಶಾಲತಾ ಸ್ವಾಗತಿಸಿ, ವಂದಿಸಿದರು.