ಮಡಿಕೇರಿ, ಸೆ. ೨೫: ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೇಶವ ನಾರಾಯಣ ಆಯೋಗ ನೀಡಿದ್ದ ವರದಿಯನ್ನು ರಾಜ್ಯ ಸರಕಾರದ ಸಚಿವ ಸಂಪುಟ ತಿರಸ್ಕಾರ ಮಾಡಿದೆ.

ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಪೊಲೀಸ್ ಅಧಿಕಾರಿಗಳಾದ ಎ.ಎಮ್ ಪ್ರಸಾದ ಐ.ಪಿ.ಎಸ್ ಪ್ರಣವ ಮೊಹಾಂತಿ ವಿರುದ್ಧ ಗಣಪತಿಯವರು ಸಂದರ್ಶನದಲ್ಲಿ ಆರೋಪಿಸಿರುವುದನ್ನು ತಳ್ಳಿಹಾಕಿ ಆತ್ಮಹತ್ಯೆಗೆ ಇವರುಗಳು ಕಾರಣವಲ್ಲವೆಂಬ ಅಭಿಪ್ರಾಯವನ್ನು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದ್ದು, ತನಿಖಾ ಪ್ರಕರಣದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬAದಿರುವುದರಿAದ ಕೆಲವು ಅಧಿಕಾರಿ/ಸಿಬ್ಬಂದಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಡಿರುವ ಶಿಫಾರಸ್ಸನ್ನು ರಾಜ್ಯ ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಕೇಶವ ನಾರಾಯಣ ಅವರು ನೀಡಿದ್ದ ವಿಚಾರಣಾ ವರದಿಯನ್ನು ಸಚಿವ ಸಂಪುಟವು ಭಾಗಶ: ಒಪ್ಪಿ, ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯ ಶಿಫಾರಸ್ಸನ್ನು ತಿರಸ್ಕರಿಸಿದೆ ಎಂದು ತಿಳಿಸಿದರು.