ಪೊನ್ನಂಪೇಟೆ, ಸೆ. ೨೫: ಗೋಣಿಕೊಪ್ಪಲು ಕಾವೇರಿ ಕಾಲೇಜು ಮೈದಾನದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಳತ್ಮಾಡು ಲಯನ್ಸ್ ಪದವಿ ಪೂರ್ವ ಕಾಲೇಜು ವತಿಯಿಂದ, ಕಾವೇರಿ ಪದವಿ ಕಾಲೇಜು ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವೀರಾಜಪೇಟೆ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಥ್ರೋ ಬಾಲ್ ಪಂದ್ಯಾವಳಿಯ ಬಾಲಕ, ಬಾಲಕಿಯರ ವಿಭಾಗದಲ್ಲಿ ಅರ್ವತೊಕ್ಕಲು ಸರ್ವದೈವತಾ ಪದವಿಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಫೈನಲ್ ಪಂದ್ಯದಲ್ಲಿ ಪರಾಭವಗೊಂಡ ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜು ಬಾಲಕಿಯರ ತಂಡ ಹಾಗೂ ಪೊನ್ನಂಪೇಟೆ ಸಂತ ಅಂತೋಣಿ ಪದವಿಪೂರ್ವ ಕಾಲೇಜು ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.

ಪAದ್ಯಾವಳಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಿಯಪ್ಪ, ಕಾವೇರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ಅವರು ಪಂದ್ಯಾವಳಿಯನ್ನು ಉದ್ಘಾಟಿಸಿದರು.

ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಲಯನ್ಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಲತಾ ಬೋಪಣ್ಣ, ಜಿಲ್ಲಾ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಚಂದ್ರಶೇಖರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ.ಟಿ. ಸಂತೋಷ್, ಬಬಿತ ಇನ್ನಿತರರು ವಿಜೇತರಿಗೆ ಟ್ರೋಫಿ ವಿತರಿಸಿದರು. ಈ ಸಂದರ್ಭ ವಿಜೇತ ತಂಡದ ತರಬೇತುದಾರ ದೈಹಿಕ ಶಿಕ್ಷಕ ಪ್ರಮೋದ್ ಗೌಡ ಇನ್ನಿತರರು ಇದ್ದರು.