ಮಡಿಕೇರಿ, ಸೆ. ೨೫: ದಸರಾ ಅಂಗವಾಗಿ ತಾ. ೨೬ ರಂದು (ಇಂದು) ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸಂಜೆ ೬ ಗಂಟೆಯಿAದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಯುವ ದಸರಾ ಅಂಗವಾಗಿ ಬೆಳಿಗ್ಗೆ ೧೦.೩೦ಕ್ಕೆ ಶ್ವಾನ ಪ್ರದರ್ಶನ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕುಶಾಲನಗರದ ಕುಂದನ ನೃತ್ಯಾಲಯದಿಂದ ನೃತ್ಯ ವೈವಿಧ್ಯ, ಕುಶಾಲನಗರದ ಭಾರತೀಯ ಸಂಗೀತ ನೃತ್ಯ ಕಲಾಶಾಲೆಯಿಂದ ಸಾಂಸ್ಕೃತಿಕ ವೈವಿಧ್ಯ, ಕನ್ನಡ ಸಿರಿ ಕಲಾ ವೃಂದದಿAದ ಸಂಗೀತ ರಸಮಂಜರಿ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ.