ಮಡಿಕೇರಿ, ಸೆ. ೨೫: ನಿಯಂತ್ರಣ ಕಳೆದುಕೊಂಡ ಬಸ್ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ಹೆದ್ದಾರಿ ನಡುವಿನ ತಾಳತ್ತಮನೆಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ.
ಮೈಸೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಹಾಗೂ ಮಂಗಳೂರಿನಿAದ ಮಡಿಕೇರಿ ಕಡೆಗೆ ಬರುತ್ತಿದ್ದ ಮಾರುತಿ ಓಮಿನಿ ಕಾರಿಗೆ ಡಿಕ್ಕಿಯಾಗಿದ್ದು, ಬಸ್ನ ಬ್ರೇಕ್ ವೈಫಲ್ಯ ಘಟನೆಗೆ ಕಾರಣ ಎನ್ನಲಾಗಿದೆ.
ಬಸ್ನಲ್ಲಿದ್ದ ೩೦ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಾಗಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿ ಕ್ರೇನ್ ಸಹಾಯದಿಂದ ಬಸ್ ಮೇಲೆತ್ತುವ ಕಾರ್ಯ ಕೈಗೊಂಡು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.