ಕೂಡಿಗೆ, ಸೆ. ೨೫: ಕೊಡಗು ಜಿಲ್ಲಾ ಸಹಕಾರ ಯೂನಿಯನ್ನ ೫ ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋಮವಾರಪೇಟೆ ತಾಲೂಕಿನಿಂದ ಕೂಡಿಗೆ ಎಸ್.ಆರ್. ಸುನಿಲ್ ರಾವ್ ಆಯ್ಕೆಯಾಗಿದ್ದಾರೆ.
ಈ ಹಿನ್ನಲೆಯಲ್ಲಿ ಕೂಡಿಗೆಯಲ್ಲಿ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷರು ನಿರ್ದೇಶಕರು ಸೇರಿದಂತೆ ಸಾರ್ವಜನಿಕರು ಸುನಿಲ್ ರಾವ್ ಅವರಿಗೆ ಸನ್ಮಾನ ಮಾಡಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭ ಸಹಕಾರ ಸಂಘದ ಅಧ್ಯಕ್ಷ, ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್, ನಿರ್ದೇಶಕರಾದ ಕೆ.ಪಿ. ರಾಜು ಎಸ್.ಎಸ್. ಕೃಷ್ಣ, ರಾಮಚಂದ್ರ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಅನಂತ, ಶಿವಕುಮಾರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಮೂಡ್ಲಿಗೌಡ, ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪುರುಷೋತ್ತಮ್, ಹನಮ ಸೇವಾ ಸಮಿತಿ ಕಾರ್ಯದರ್ಶಿ ಧರ್ಮ, ನಿವೃತ್ತ ಶಿಕ್ಷಕ ರಾಜೇಗೌಡ, ನಕೋಲ್ ಹಾಗೂ ಗ್ರಾಮಸ್ಥರು ಹಾಜರಿದ್ದರು.