ಮಡಿಕೇರಿ, ಸೆ. ೨೬: ಜಾಗತಿಕ ಮಟ್ಟದಲ್ಲಿ ಖ್ಯಾತಿ ಪಡೆದಿರುವ ರಘು ದೀಕ್ಷಿತ್ ನೇತೃತ್ವದ ತಂಡದಿAದ ಅ. ೧ ರ ಅಯುಧ ಪೂಜೆಯಂದು ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ. ಇದರೊಂದಿಗೆ ದಸರಾ ಹಬ್ಬವನ್ನು ಆಕರ್ಷಕಗೊಳಿಸಲು ಹತ್ತಾರು ಯೋಜನೆಗಳನ್ನು ರೂಪಿಸಲಾಗಿದೆ ಎಂದು ದಸರಾ ಸಮಿತಿ ಪ್ರಮುಖರು ಮಾಹಿತಿ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಮಡಿಕೇರಿ ದಸರಾವೂ ಸರ್ವರ ಸಹಕಾರದಿಂದ ಯಶಸ್ವಿಯಾಗಿ ನಡೆಯುತ್ತಿದೆ. ಮುಂಬರುವ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಲು ಸಮಿತಿ ಶ್ರಮಿಸುತ್ತಿದೆ. ಅ. ೨ ರಂದು ವಿವಿಧ ತಂಡದಿAದ ರಸಮಂಜರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಡಿಕೇರಿ ದಸರಾ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದು ನಗರಸಭೆ ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಹಾಗೂ ನಗರ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ ಮನವಿ ಮಾಡಿದರು.

ದಸರಾ ಹಿನ್ನೆಲೆ ನಗರದ ಮುಖ್ಯಬೀದಿಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ, ವೇದಿಕೆ ನಿರ್ಮಾಣ, ಡ್ರೋನ್, ಗ್ಯಾಲರಿ ನಿರ್ಮಾಣಕ್ಕೆ ಒಟ್ಟು ೫೮ ಲಕ್ಷ ವೆಚ್ಚದಲ್ಲಿ ಮಾಡಲಾಗಿದೆ. ಶಾಸಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ದಸರಾ ಆಚರಣೆಗೆ ದಸರಾ ಸಮಿತಿ ಸಿದ್ಧತೆ ಮಾಡುತ್ತಿದೆ. ಅಲ್ಲದೇ, ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣವನ್ನು ಸೃಷ್ಟಿಸಲಾಗಿದೆ. ದಸರಾ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದು ಮನವಿ ಮಾಡಿದರು. ಬಅ.೧ರಂದು ಆಯುಧ ಪೂಜೆ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಆಹ್ವಾನಿಸಲಾಗಿದೆ. ವಿಜಯದಶಮಿಯಂದು ದಕ್ಷಿಣ ಕನ್ನಡ ಜಿಲ್ಲೆಯ ಶೇಡ್ಸ್ ತಂಡದಿAದ ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಮಾತನಾಡಿ, ಪ್ರಸಕ್ತ ಸಾಲಿನ ದಸರಾ ಉತ್ಸವಕ್ಕೆ ೧.೫೦ ಕೋಟಿ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ದಶಮಂಟಪ, ಕರಗ, ವಿವಿಧ ಕಾರ್ಯಕ್ರಮಗಳಿಗೆ ಸಾಕಷ್ಟು ವೆಚ್ಚವಾಗುತ್ತಿದೆ. ಆದ್ದರಿಂದ ಮುಂದಿನ ವರ್ಷದಿಂದ ೨ ಕೋಟಿ ನೀಡುವಂತೆ ಬೇಡಿಕೆ ಇಡಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ನಗರಸಭೆ ಮತ್ತು ನಗರ ದಸರಾ ಸಮಿತಿ ಅಧ್ಯಕ್ಷೆ ಕಲಾವತಿ, ಖಜಾಂಚಿ ಸಬಿತಾ, ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ ಇದ್ದರು.