ಜನಜಾಗೃತಿ ಕಾರ್ಯಕ್ರಮ

ಮಡಿಕೇರಿ, ಸೆ. ೨೬: ರಾಜ್ಯ ಸರಕಾರದ ಜಾತಿವಾರು ಗಣತಿಯ ಎಲ್ಲಾ ಮೂರು ಕಾಲಂಗಳಲ್ಲಿ "ಕೊಡವ" ಎಂದು ನಮೂದಿಸಬೇಕು ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನಜಾಗೃತಿ ಮೂಡಿಸಲು ಮತ್ತು ಸರಕಾರದ ಗಮನ ಸೆಳೆಯಲು ತಾ. ೩೦ ರಂದು ಚೇರಂಬಾಣೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ೧೪ನೇ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಬೆಳಿಗ್ಗೆ ೧೦.೩೦ ಗಂಟೆಗೆ ಚೇರಂಬಾಣೆಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಸೇರಿದಂತೆ ಕೊಡವರ ಎಲ್ಲಾ ಸಂವಿಧಾನಿಕ ಹಕ್ಕೊತ್ತಾಯಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದರು.