ಸೋಮವಾರಪೇಟೆ, ಸೆ. ೨೬: ಧರ್ಮ ಉಳಿಯಬೇಕಾದರೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಯಾಗಬೇಕು ಎಂದು ಮುಳ್ಳೂರು ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಹೇಳಿದರು.
ಸಮೀಪದ ನೇಗಳ್ಳೆ ಕರ್ಕಳ್ಳಿ ಗ್ರಾಮದ ವೀರಭದ್ರ ದೇವಾಲಯ ಹಾಗೂ ಗ್ರಾಮ ಸಮಿತಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ಅಂಗವಾಗಿ ದೇವಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.
ಸನಾತನ ಹಿಂದೂ ಧರ್ಮದ ಮೇಲೆ ಹಿಂದಿನಿAದಲೂ ದಬ್ಬಾಳಿಕೆ ನಡೆಯುತ್ತಲೇ ಬಂದಿದ್ದು, ಇಂದಿಗೂ ಮುಂದುವರೆದಿದೆ. ಇಂತಹ ಕೃತ್ಯಗಳಿಗೆ ಜಗ್ಗದೇ ನಮ್ಮ ಧರ್ಮವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಹಿಂದೂಗಳ ಮೇಲಿದೆ ಎಂದರು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವೀರಭದ್ರ ಸ್ವಾಮಿ ವರ್ಧಂತಿ ಮಹೋತ್ಸವದ ರಾಷ್ಟಿçÃಯ ಉಪಾಧ್ಯಕ್ಷ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಇಂದು ವೀರಭದ್ರ ಸ್ವಾಮಿ ವರ್ಧಂತಿಯನ್ನು ಗ್ರಾಮದಿಂದ ಹಿಡಿದು ವಿದೇಶಗಳಲ್ಲೂ ಆಚರಿಸುತ್ತಿರುವುದು ವಿಶೇಷವಾಗಿದೆ ಎಂದರು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ ೫ ವರ್ಷಗಳಿಂದ ರಾಷ್ಟಿçÃಯ ಮಟ್ಟದಲ್ಲಿ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಬಾರಿಯಿಂದ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿಯೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೀರಭದ್ರೇಶ್ವರ ವರ್ಧಂತಿ ಮಹೋತ್ಸವದ ರಾಜ್ಯ ಉಪಾಧ್ಯಕ್ಷರಾದ ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಮಾತನಾಡಿ, ಅಹಂಕಾರ ಮಟ್ಟಹಾಕಲು ಅವತರಿಸಿದವನು ವೀರಭದ್ರ ಸ್ವಾಮಿ; ಇಂತಹ ಸ್ವಾಮಿಯ ವರ್ಧಂತಿ ಆಚರಿಸುವುದು ನಮ್ಮೆಲ್ಲರ ಭಾಗ್ಯವೆಂದರು.
ಡಿಸೆAಬರ್ ೬ ರಂದು ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವೀರಭದ್ರೇಶ್ವರ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂದು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ಶ್ರೀ ನಿಶ್ಚಲ ನಿರಂಜನ ದೇಶೀಕೇಂದ್ರ ಸ್ವಾಮೀಜಿ ಉಪಸ್ಥಿತರಿದ್ದರು. ವರ್ಧಂತಿ ಮಹೋತ್ಸವದ ಅಂಗವಾಗಿ ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಜಂಗಮ ಅರ್ಚಕರ ಸಂಘದ ಅಧ್ಯಕ್ಷ ಹಿರೇಮಠ, ಶೇಖಯ್ಯ, ವೇದಮೂರ್ತಿ ಪುರೋಹಿತ್ವದಲ್ಲಿ ವೀರಭದ್ರ ಸ್ವಾಮಿಗೆ ರುದ್ರಾಭಿಷೇಕ, ಅಷ್ಟೋತ್ತರ, ಬಿಲ್ವಾರ್ಚನೆ, ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನೆರವೇರಿತು. ಕಾರ್ಯಕ್ರಮದಲ್ಲಿ ದೇವಾಲಯ ಸಮಿತಿ ಉಪಾಧ್ಯಕ್ಷ ಧರ್ಮಪ್ಪ, ಕಾರ್ಯದರ್ಶಿ ರವಿಕುಮಾರ್ ಹಾಗೂ ಪದಾಧಿಕಾರಿಗಳು ಇದ್ದರು.