ಭಾಗಮಂಡಲ, ಸೆ. ೨೬ : ಕಾವೇರಿ ಜಾತ್ರೆಗೆ ಸಂಬAಧಿಸಿದAತೆ ಭಾಗಮಂಡಲದಲ್ಲಿ ಶುಕ್ರವಾರ ವಿವಿಧ ಧಾರ್ಮಿಕ ಕಾರ್ಯಗಳಿಗೆ ಚಾಲನೆ ದೊರೆಯಿತು.

ಇಂದಿನಿAದ ಅಕ್ಟೋಬರ್ ೧೭ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯಕ್ರಮ ಜರುಗಿತು. ಭಾಗಮಂಡಲದ ಬಳ್ಳಡ್ಕ ಕುಟುಂಬಸ್ಥರ ಐನ್‌ಮನೆಯಲ್ಲಿ ಒಟ್ಟು ಸೇರಿ ಮನೆಯಿಂದ ಅಕ್ಕಿಯನ್ನು ನಾಲ್ಕನೇ ಪುಟಕ್ಕೆ (ಮೊದಲ ಪುಟದಿಂದ) ತಂದು ಭಗಂಡೇಶ್ವರ ದೇವಾಲಯದಲ್ಲಿ ಇರುವ ಪತ್ತಾಯಕ್ಕೆ ಅಕ್ಕಿ ಹಾಕುವ ಮೂಲಕ ಕಾವೇರಿ ಜಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ೯.೩೧ಕ್ಕೆ ತುಲಾ ಲಗ್ನದಲ್ಲಿ ತಲಕಾವೇರಿ ದೇವಾಲಯದ ತಕ್ಕರಾದ ಕೋಡಿ ಮೋಟಯ್ಯ ಪತ್ತಾಯಕ್ಕೆ ಅಕ್ಕಿಯನ್ನು ಹಾಕಿದರು. ತಕ್ಕಮುಖ್ಯಸ್ಥರಾದ ಬಳ್ಳಡ್ಕ ಐನ್‌ಮನೆಯಿಂದ ಅಕ್ಕಿಯನ್ನು ವಾದ್ಯ ಸಹಿತವಾಗಿ ತಂದು ಭಾಗಮಂಡಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿ ಪತ್ತಾಯಕ್ಕೆ ಅಕ್ಕಿಯನ್ನು ಹಾಕಲಾಯಿತು. ಈ ಸಂದರ್ಭ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಭಾಗಮಂಡಲ ಪಾರುಪತ್ಯಗಾರ ಪೊನ್ನಣ್ಣ, ತಲಕಾವೇರಿ ಪಾರುಪತ್ಯಗಾರ ಕೋಡಿ ಮಂಜು, ಪ್ರಧಾನ ಅರ್ಚಕ ಹರೀಶ್ ಭಟ್ ಉಪಸ್ಥಿತರಿದ್ದರು.